ಧರ್ಮಸ್ಥಳ: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಮಾಜಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮತ್ತು ಪಶುಸಂಗೋಪನಾ ಸಚಿವ ವೆಂಕಟೇಶ್ ಶನಿವಾರ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ತಿ ಹಾಗೂ

ಸಚಿವರನ್ನು ಪ್ರವೇಶದ್ವಾರದಿಂದ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು.ಡಿ. ಹರ್ಷೇಂದ್ರಕುಮಾರ್ ಇವರನ್ನು ಸ್ವಾಗತಿಸಿದರು.
ಬಳಿಕ ದೇವರದರ್ಶನ ಮಾಡಿ, ವಿಶೇಷಪೂಜೆ ಸಲ್ಲಿಸಿ, ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮಾಜಿ ಸಚಿವರುಗಳಾದ ಬಿ.ರಮಾನಾಥ ರೈ, ವಿನಯಕುಮಾರ್ ಸೊರಕೆ, ಕೆ. ಅಭಯಚಂದ್ರ ಜೈನ್, ಶಾಸಕ ಅಶೋಕ ಕುಮಾರ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ಕುಮಾರ್, ಸರ್ಕಾರದ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಂ, ಟಿ.ಎಂ.ಶಹೀದ್ ತೆಕ್ಕಿಲ್, ಎಸ್.ಡಿ. ಸಂಪತ್ ಸಾಮ್ರಾಜ್ಯ ಶಿರ್ತಾಡಿ ಉಪಸ್ಥಿತರಿದ್ದರು.ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಭೋಜನ ಸ್ವೀಕರಿಸಿ ಸಚಿವರುಗಳು ಮಂಗಳೂರಿಗೆ ಪ್ರಯಾಣ ಬೆಳೆಸಿದರು.















