ಮಡಿಕೇರಿ:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಕೊಡಗು ಜಿಲ್ಲೆ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಅವರು ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದರು. ಭಾಗಮಂಡಲ ಕಾವೇರಿ ಕಾಲೇಜು ಮೈದಾನದ ಹೆಲಿಪ್ಯಾಡ್ನಲ್ಲಿ ಸಿಎಂ ಅವರನ್ನು ರಾಜಕೀಯ
ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ,ಜಿಲ್ಲಾ ಉಸ್ತುವಾರಿ ಸಚಿವ ನರೇಂದ್ರ ಸ್ವಾಮಿ.,ಐಜಿ ಬೋರಲಿಂಗಯ್ಯ, ಜಿಲ್ಲಾದಿಕಾರಿ ಸೋಮಶೇಖರ್, ಪೊಲೀಸ್ ವರಿಷ್ಟಾಧಿಕಾರಿ ಬಿಂದುಮಣಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷ ಮೆಹರೋಜ್ ಖಾನ್, ಅರುಣ್ ಮಾಚಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರಿಂದ ಡಿ.ಕೆ. ಶಿವಕುಮಾರ್ ಅವರಿಗೆ ವೈಭವದ ಸ್ವಾಗತ ನೀಡಲಾಯಿತು.
ಭಗಂಡೇಶ್ವರ ದೇವಾಲಯಕ್ಕೆ ತೆರಳಿ ಭಗಂಡೇಶ್ವರನಿಗೆ ಪೂಜೆ ಸಲ್ಲಿಸಿಸಿದರು. ಭಾಗಮಂಡಲ ಭೇಟಿ ಸಂದಭ೯ ಸುದ್ದಿಗಾರರಿಗೆ

ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಅವರು ಕೊಡಗಿಗೆ ಸಿಎಂ ಆದ ಬಳಿಕ ಮೊದಲ ಬಾರಿಗೆ ಬಂದಿದ್ದೇನೆ. ರಾಜ್ಯದ ಜಲಾಶಯಗಳು ಭತಿ೯ಯಾಗಲಿ ಎಂದು ಕೊಡಗಿನ ದೈವ ಭಗಂಡೇಶ್ವರನಿಗೆ ಪೂಜೆ, ಪ್ರಾಥ೯ನೆ ಸಲ್ಲಿಸಿದ್ದೇನೆ.
ಕೊಡಗಿನಲ್ಲಿ ಮಳೆಯಿಂದಾಗಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ವರದಿ ಸಂಗ್ರಹಿಸಿ ಪರಿಹಾರದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವೆ ಎಂದಯ ಶಿವಕುಮಾರ್ ಹೇಳಿದರು.








































