ಸುಳ್ಯ: ಸುಳ್ಯ ತಾಲೂಕಿನ , ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದ್ದು, ಆರಂತೋಡು ಮತ್ತು ಪಂಜ ಅರೋಗ್ಯ ಉಪಕೇಂದ್ರಕ್ಕೆ ಸ್ಟಾಫ್ ನರ್ಸ್ ಹುದ್ದೆ ಸೃಷ್ಠಿಸಿ ನೇಮಕಾತಿ ಮಾಡಬೇಕು, ಹೆಚ್ಚುವರಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರು ಮಾಡಬೇಕು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಗ ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಮೊರಾರ್ಜಿ ದೇಸಾಯಿ ಶಾಲೆ ಪ್ರಕೃತ ಪಂಜದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಹೆಚ್ಚಿನ ಬೇಡಿಕೆ ಇರುವುದರಿಂದ ಹೆಚ್ಚುವರಿಯಾಗಿ ಜಾಲ್ಸೂರಿನಲ್ಲಿ ವಸತಿ ಶಾಲೆ ಪ್ರಾರಂಬಿಸಭೆಕು ಎಂದು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪoಗಾಯ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ,ಕೆಪಿಸಿಸಿ ಸಂಯೋಜಕ ಜಿ. ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಅಬ್ದುಲ್ ಗಫೂರ್ ಕಲ್ಮಡ್ಕ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸ್ಮಾಯಿಲ್ ಪಡಪಿನಂಗಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಸತೀಶ್ ಕೂಜುಗೋಡು, ಜಗದೀಶ್ ಪಡ್ಪು, ಮೊದಲಾದವರು ಉಪಸ್ಥಿತರಿದ್ದರು.