ನಿಲಂಬೂರು: ಕೇರಳದ ಮಲಪ್ಪುರಂ ಜಿಲ್ಲೆಯ ನಿಲಂಬೂರಿನಲ್ಲಿ ನಡೆಯುವ ಮಾಜಿ ಸಚಿವ ಆರ್ಯಾಡನ್ ಮೊಹಮ್ಮದ್ ಅನುಸ್ಮರಣೆ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರಿಗೆ ಆರ್ಯಾಡನ್ ಮೊಹಮ್ಮದ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಲು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳಕ್ಕೆ ಆಗಮಿಸಿದ್ದಾರೆ.ವಿಶೇಷ ವಿಮಾನದಲ್ಲಿ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಅಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಿಕ ನಿಲಂಬೂರಿಗೆ ತೆರಳಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಹಾಗೂ ಸಮಿತಿಯ ಪದಾಧಿಕಾರಿಗಳು
ಸ್ವಾಗತಿಸಿದರು. ಮುಖ್ಯಮಂತ್ರಿ ಅವರ ಜೊತೆ ಸಚಿವರಾದ ಭೈರತಿ ಸುರೇಶ್, ವೆಂಕಟೇಶ್, ಮುಖ್ಯಮಂತ್ರಿಗಳ ಸಲಹೆಗಾರರಾದ ನಸೀರ್ ಅಹಮ್ಮದ್, ಗೋವಿಂದರಾಜ್, ಎ.ಎಸ್ ಪೊನ್ನಣ್ಣ, ಪ್ರಭಾಕರ್ ಉಪಸ್ಥಿತರಿದ್ದರು.