ಬೆಂಗಳೂರು: ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ದೆಹಲಿಗೆ ಪ್ರಯಾಣ ಬೆಳೆಸುವ ಮೊದಲು ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ,ಇಂದು ದೆಹಲಿಯಲ್ಲಿ
ನಮ್ಮ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದು, ಅವರಿಗೆ ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ಹೇಳಿದರು. ಮುಂದೆ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ ಜತೆಗೂ ಪ್ರಮುಖ ವಿಚಾರಗಳನ್ನು ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.








