ಬೆಂಗಳೂರು:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದೆ. ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಇದೇ ವೇಳೆ ಎರಡು
ವಾರಗಳ ಕಾಲ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ಕೆಳ ನ್ಯಾಯಾಲಯದ ವಿಚಾರಣೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.
ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ ಈ ತೀರ್ಪು ನೀಡಿದೆ. ಆ ಮೂಲಕ ಮುಡಾ ವಿಚಾರದಲ್ಲಿ ರಾಜ್ಯಪಾಲರು ನೀಡಿದ ಆದೇಶ ಹೈಕೋರ್ಟ್ ಎತ್ತಿ ಹಿಡಿದಿದೆ.