ಸುಳ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.17ರಂದು ದ.ಕ. ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಫೆ.17ರಂದು ಮಧ್ಯಾಹ್ನ 1ಗಂಟೆಗೆ ಬೆಂಗಳೂರು ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ 2 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ
ಆಗಮಿಸಲಿದ್ದಾರೆ. 2.15ಕ್ಕೆ ಮಂಗಳೂರು ಅಡ್ಯಾರ್ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಮೈದಾನದಲ್ಲಿ ನಡೆಯುವ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದರೆ. ಬಳಿಕ ಜಿಲ್ಲೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಜೆ 5.45ಕ್ಕೆ ಮಂಗಳೂರು ವಿಮಾನ ನಿಲ್ದಣದಿಂದ ವಿಶೇಷ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









