ಮಡಿಕೇರಿ: ಜಗದೀಶ ಶೆಟ್ಟರ್ ಅವರಿಗೆ ಕಾಂಗ್ರೆಸ್ನಿಂದ ಯಾವುದೇ ಅನ್ಯಾಯ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿನ ವಿರಾಜಪೇಟೆ ತಾಲ್ಲೂಕಿನ ಅಂಬಟ್ಟಿಯ ಗಾಲ್ಫ್ ಮೈದಾನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು.ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದೆ ಬಿಜೆಪಿ ವಂಚಿಸಿದೆ ಎಂದು ಹೇಳಿ ಅವರು
ಕಾಂಗ್ರೆಸ್ಗೆ ಬಂದರು. ಪಕ್ಷವು ಅವರಿಗೆ ಟಿಕೆಟ್ ನೀಡಿತು. ಸ್ವ ಕ್ಷೇತ್ರದಲ್ಲೇ ಅವರು ಸೋತರು. ಆದರೂ ಅವರಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ನೀಡಲಾಯಿತು. ಕಾಂಗ್ರೆಸ್ ಪಕ್ಷದಿಂದ ಅವರಿಗೆ ಯಾವುದೇ ಅನ್ಯಾಯ ಆಗಿಲ್ಲ. ಆದರೆ ಅವರು ಪಕ್ಷಕ್ಕೆ ರಾಜೀನಾಮೆ ನೀಡಿರುವ ವಿಚಾರ ಗೊತ್ತಾಗಿಲ್ಲ ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.
ಈಚೆಗೆ ನನ್ನ ಬಳಿ ಮಾತನಾಡಿದ್ದಾಗಲೂ ಅವರು ಬಿಜೆಪಿ ನನಗೆ ಅನ್ಯಾಯ ಮಾಡಿದೆ. ವಾಪಸ್ ಆ ಪಕ್ಷಕ್ಕೆ ಹೋಗುವುದಿಲ್ಲ ಎಂದಿದ್ದರು ಎಂದು ಸಿಎಂ ಹೇಳಿದರು.










