ಮಂಗಳೂರು:ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಇಂದು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿ ದರುಶನ ಪಡೆದರು. ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರಿಗೆ ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು.ಮಂಗಳೂರು ವಿಮಾನ ನಿಲ್ದಾಣದಲ್ಲಿಸಚಿವ ಖಾದರ್ ಅವರಿಗೆ ಸ್ವಾಗತ ಕೋರಿದರು. ಕೊಲ್ಲೂರು ದೇವಸ್ಥಾನಕ್ಕೆ

ಆಗಮಿಸಿದ ಅವರು ಕೊಲ್ಲೂರು ಮೂಕಾಂಬಿಕೆಯ ದರುಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ಪೂರ್ಣಕುಂಭ ಸ್ವಾಗತ ನೀಡಲಾಯಿತು. ದೇವಾಲಯದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.
ಮಂಗಳೂರಿನಿಂದ ರಸ್ತೆ ಮಾರ್ಗದ ಮೂಲಕ ಕೊಲ್ಲೂರಿನತ್ತ ಪ್ರಯಾಣ ಬೆಳೆಸಿದರು. ವಿಮಾನ ನಿಲ್ದಾಣದಲ್ಲಿ ವ್ಯಾಪಕ ಭದ್ರತೆ ಕೈಗೊಳ್ಳಲಾಗಿತ್ತು. ನೂರಾರು ಮಂದಿ ಅಭಿಮಾನಿಗಳು ವಿವಿಧೆಡೆ ಅವರನ್ನು ನೋಡಲು ಕಾದಿದ್ದರು. ವಿಜಯ್ ನಗುನಗುತ್ತಾ ಅಭಿಮಾನಿಗಳತ್ತ ಕೈಬೀಸಿ ಪ್ರಯಾಣ ಮುಂದುವರಿಸಿದರು.















