ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದಾರೆ.ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಿಂದ ಬೆಳ್ತಂಗಡಿಗೆ ತೆರಳಿದರು.ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ಆಗಮಿಸಿದ್ದಾರೆ.ಇಂದು
ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ನಡೆಯಲಿರುವ ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಸಿದ್ಧರಾಮಯ್ಯ ಅವರು ಭಾಗಿಯಾಗಲಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು
ನಮ್ಮ ಸರಕಾರ ಬಂದು ಒಂದು ವರ್ಷವಾಗಿದೆ.ನಾವು ಏನೇನು ಮಾಡಿದ್ದೇವೆ ಅಂತ ಜನರಿಗೆ ತಿಳಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಬಿಜೆಪಿಯವರು ಬಜೆಟ್ ಓದುವುದಿಲ್ಲ ಎಕನಾಮಿಕ್ಸ್ ಗೊತ್ತಾಗುವುದಿಲ್ಲ ಎಂದರು. ಅಭಿವೃದ್ಧಿ ಶೂನ್ಯ ಅಭಿವೃದ್ಧಿ ಶೂನ್ಯ ಅಂತಾರೆ. ಬಡವರಿಗೆ ಆರ್ಥಿಕವಾಗಿ ಸಫಲತೆ ಕೊಡುವುದು ಅಭಿವೃದ್ಧಿ ಅಲ್ವಾ. ದೇಶಕ್ಕೆ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು. ಆರ್ಥಿಕ ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಅಂಬೇಡ್ಕರ್ ಕೂಡಾ ಹೇಳಿದರು ಎಂದರು.