ಬೆಂಗಳೂರು: ಮೇ.20 ರಂದು (ನಾಳೆ) ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಇದಕ್ಕಾಗಿ ಬೆಂಗಳೂರು ನಗರದಲ್ಲಿರುವ ಕಂಠೀರವಣ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಸಮಾರಂಭದಲ್ಲಿ ವಿವಿಧ ರಾಜ್ಯಗಳ ಸಿಎಂಗಳು, ದೇಶದ ವಿವಿಧ ಗಣ್ಯರು ಭಾಗಿಯಾಗುವ ಸಾಧ್ಯತೆ ಇದೆ.
ಕರ್ನಾಟಕದ ನೂತನ ಸಿಎಂ, ಡಿಸಿಎಂ ಪ್ರಮಾಣವಚನ ಸಮಾರಂಭಕ್ಕೆ
ಕಾಂಗ್ರೆಸ್ ಹಾಗೂ ಕಾಂಗ್ರೆಸ್ಸೇತರ ನಾಯಕರಿಗೆ ಆಹ್ವಾನಿಸಲಾಗಿದ್ದು, ಶರದ್ ಪವಾರ್ ಅವರಿಗೆ ಅವರು ಆಹ್ವಾನ ನೀಡಲಾಗಿದೆ. ಅದೇ ರೀತಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಆಗಮಿಸುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಸುಖು, ಛತ್ತೀಸಗಢ ಸಿಎಂ ಭೂಪೇಶ್ ಬಾಘೆಲ್, ಬಿಹಾರ್ ಸಿಎಂ ನಿತೀಶ್ ಕುಮಾರ್, ತಮಿಳು ನಾಡು ಸಿಎಂ ಎಂ.ಕೆ ಸ್ಟಾಲಿನ್ ಸೇರಿದಂತೆ ನೆರೆಹೊರೆಯ ರಾಜ್ಯಗಳ ಕಾಂಗ್ರೆಸ್ ಮತ್ತಿತರ ಪಕ್ಷಗಳ ಮುಖಂಡರು ಪಾಲ್ಗೊಳ್ಳುವ ಸಾಧ್ಯತೆ ಇದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೂ ಆಹ್ವಾನ ನೀಡಲಾಗಿದ್ದು, ಅವರು ತಮ್ಮ ಪರವಾಗಿ ಪ್ರತಿನಿಧಿಯನ್ನು ಕಳುಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.