ಸುಳ್ಯ:ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಐ.ಎಂ.ಎ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯ ನಗರ ಪಂಚಾಯತ್ನಿಂದ ಇತ್ತೀಚೆಗೆ ಬಾಗಲಕೋಟೆಗೆ ವರ್ಗಾವಣೆಗೊಂಡ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್ ಅವರಿಗೆ ಬೀಳ್ಕೋಡುಗೆ ಸಮಾರಂಭ ಜು.15 ರಂದು ವರ್ತಕರ ಸಮುದಾಯ ಭವನದಲ್ಲಿ ನಡೆಯಿತು.ಸಮಾರಂಭದ
ಅಧ್ಯಕ್ಷತೆಯನ್ನು ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ಅಧ್ಯಕ್ಷತೆ ವಹಿಸಿದ್ದರು.ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಬೊಮ್ಮೆಟ್ಟಿ ಸುಧಾಕರ್ ಅವರನ್ನು ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸಿ ಬೀಳ್ಕೊಟ್ಟರು.ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯಐ.ಎಂ.ಎ ಅಧ್ಯಕ್ಷೆ ಡಾ.ವೀಣಾ, ವರ್ತಕರ ಪ್ರಧಾನ ಕಾರ್ಯದರ್ಶಿ ಡಿ.ಎಸ್.ಗಿರೀಶ್, ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉದ್ಯಮಿ ಮಧುಸೂದನ್ ಕುಂಭಕೋಡು, ಲತಾ ಮಧುಸೂದನ್,ಸುಂದರ ರಾವ್ ಹಳೆಗೇಟು, ಇಬ್ರಾಹಿಂ ಕದಿಕಡ್ಕ, ಜತ್ತಪ್ಪ ರೈ ಅರಂಬೂರು, ಜನಾರ್ದನ ನಾಯ್ಕ್ ಕೇರ್ಪಳ, ಧರ್ಮಪಾಲ ಕುರುಂಜಿ, ಸಿ.ಎಚ್.ಪ್ರಭಾಕರನ್ ನಾಯರ್, ಸಾಂಗ್ ಸಿಂಗ್, ಸಂಘದ ಜತೆ ಕಾರ್ಯದರ್ಶಿ ಅಬ್ದುಲ್ ರಹೀಮ್ ಉಪಸ್ಥಿತರಿದ್ದರು.ಪಿ.ಬಿ.
ಸುಧಾಕರ ರೈ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಡಿ.ಎಸ್.ಗಿರೀಶ್ ಕಾರ್ಯಕ್ರಮ ನಿರೂಪಿಸಿದರು.





