ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಗುರುವಾರದಿಂದ ಕೆಲವು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ
ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ
ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಇದೇ 25ರವರೆಗೂ ಕರಾವಳಿ ಭಾಗದಲ್ಲಿ ಉತ್ತಮ ಮಳೆ ಮುಂದುವರಿಯುವ ಸಂಭವವಿದ್ದು, ಶುಕ್ರವಾರದಿಂದ ಮೂರು ದಿನಗಳು ಉಡುಪಿ, ದಕ್ಷಿಣ ಕನ್ನಡದ ಜತೆಗೆ ಉತ್ತರ ಕನ್ನಡ ಜಿಲ್ಲೆಗೂ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಮುಂದಿನ ಐದು ದಿನಗಳು ರಾಜ್ಯದ ವಿವಿಧ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.