ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಬುಧವಾರ ಬೆಳಿಗ್ಗೆ ವರೆಗೆ ಭಾರೀ ಮಳೆಯಾಗುವ ಸೂಚನೆಯಿದ್ದು ಭಾರತೀಯ ಹವಾಮಾನ ಇಲಾಖೆ. ‘ರೆಡ್ ಅಲರ್ಟ್ ‘ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ
ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ 8 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆಯಾಗಲಿದ್ದು ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿದಿದೆ. ಮುಂದಿನ 5 ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆ ಆರಂಭವಾಗಿದ್ದು ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಸುಳ್ಯ ತಾಲೂಕಿನಲ್ಲಿ ಮಂಗಳವಾರ ಮಧ್ಯಾಹ್ಮನದ ಬಳಿಕ ಭಾರೀ ಮಳೆ ಸುರಿಯುತಿದೆ. ಎಡೆಬಿಡದೆ ಕುಂಭದ್ರೋಣ ಮಳೆ ಸುರಿಯುತಿದೆ.