ಮಡಿಕೇರಿ:ಕಾಫಿ ಘಮ ಬೀರುವ ಕೊಡಗಿನ ಮಡಿಕೇರಿಯ ದಸರಾ ನಾಡಿನ ಬಲು ಆಕರ್ಷಣೆ ಹಬ್ಬ.ಈ ದಸರಾದ ವೈಭವವನ್ನು ಕಣ್ತುಂಬಿಕೊಳ್ಳಲು ಆಗಮಿಸುವವರಿಗೆ ತಮ್ಮ ನಾಡಿನ ಕಾಫಿಯ ವಿಶೇಷತೆಯನ್ನು ಸಾರಲು ಕಾಫಿ ದಸರಾವನ್ನು ಹಮ್ಮಿಕೊಳ್ಳಲಾಗಿದೆ.ದಸರಾ ಸಂದರ್ಭದಲ್ಲಿ ಮಡಿಕೇರಿಯ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಸೆ.24 ರಂದು ಬುಧವಾರ ಕಾಫಿ ದಸರಾ ಸಂಭ್ರಮ ಮೇಳೈಸಲಿದೆ. ಕಾಫಿ ಕೖಷಿಕರಿಗೆ ಸನ್ಮಾನ, ಕಾಫಿ ಮಳಿಗೆಗೆಳು ಮತ್ತು
ಕಾಫಿ ಕೖಷಿ ಸಂಬಂಧಿತ ಮಾಹಿತಿ ಕಾಫಿ ದಸರಾದ ವಿಶೇಷತೆ.ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಪರಿಕಲ್ಪನೆಯಲ್ಲಿ ಕಳೆದ ವರ್ಷದಿಂದ ಮಡಿಕೇರಿ ದಸರಾಕ್ಕೆ ಪರಿಚಯಿಸಲ್ಪಟ್ಟ ಕಾಫಿ ದಸರಾಕ್ಕೆ ಉತ್ತಮ ಸ್ಪಂದನ ದೊರಕಿದ್ದ ಹಿನ್ನಲೆಯಲ್ಲಿ ಈ ವರ್ಷವೂ ಕಾಫಿ ದಸರಾ ಆಯೋಜಿಸಲಾಗಿದೆ ಎನ್ನುತ್ತಾರೆ ಕಾಫಿ ದಸರಾ ಸಂಚಾಲಕ ಅನಿಲ್. ಹೆಚ್.ಟಿ.
ಕಾಫಿ ದಸರಾ ಅಂಗವಾಗಿ ಕಾಫಿ ಕೖಷಿಕರಿಗ ಮಾಹಿತಿ ನೀಡುವ ಉಪನ್ಯಾಸ ಕಾರ್ಯಕ್ರಮ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಏಪ೯ಡಿಸಲಾಗಿದೆ. ಕಾಫಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಿಕೆ, ಹೊಸ ತಳಿಗಳ ಬಗ್ಗೆ, ರೋಬಸ್ಟಾ ಕಾಫಿಯಲ್ಲಿ ಕುಬ್ಜ ತಳಿಯ ಬಗ್ಗೆ, ಕಾಫಿ ಕೖಷಿಗೆ ಪೂರಕವಾದ ಮಣ್ಣಿನ ಫಲವತ್ತತೆ ಬಗ್ಗೆ ಕಾರ್ಯಾಗಾರ ನಡೆಯಲಿದೆ.
ಕಾಫಿ ದಸರಾ ಅಂಗವಾಗಿ ಕಾಫಿಯಿಂದ ತಯಾರಿಸಲಾದ ವೈವಿಧ್ಯಮಯ ಖಾದ್ಯಗಳ ಸ್ಪರ್ಧೆ ಆಯೋಜಿಸಲಾಗಿದೆ. ಕಾಫಿ ಫ್ಲೆವರ್ ಕೇಕ್, ವಿಭಾಗ,ಕಾಫಿ ಫ್ಲೆವರ್ ಕಪ್ ಕೇಕ್ ವಿಭಾಗ, ಕಾಫಿ ಫ್ಲೆವರ್ ಬ್ರೌನಿ ವಿಭಾಗ,ಕಾಫಿ ಫ್ಲೆವರ್ ಬಿಸ್ಕತ್ ವಿಭಾಗ,ಕಾಫಿ ಫ್ಲೆವರ್ ಪುಡ್ಡಿಂಗ್ ವಿಭಾಗ, ವಿಭಿನ್ನ ರುಚಿಯಿರುವ ಕಾಫಿ ಪಾನೀಯವಿಭಾಗ, ಕಾಫಿ ಫ್ಲೇವರ್ ಚಾಕಲೇಟ್ ವಿಭಾಗಗಳಲ್ಲಿ ಸ್ಪಧೆ೯ ಆಯೋಜಿತವಾಗಿದೆ.
ಕಾಫಿ ದಸರಾ ಅಂಗವಾಗಿ ಈ ವರ್ಷವೂ 35 ಮಳಿಗೆಗಳು ಕಾಫಿ ಸಂಬಂಧಿತ ಮಾಹಿತಿಯನ್ನು ನೀಡಲಿವೆ. ಕೊಡಗಿನ ಅನೇಕ ಕಾಫಿ ಕೆಫೆಗಳಲ್ಲಿ ಸ್ವಾದಿಷ್ಟ ಕಾಫಿ ಸವಿಯನ್ನೂ ಸವಿಯಬಹುದಾಗಿದೆ. ಭಾರತೀಯ ಕಾಫಿ ಮಂಡಳಿ, ವಿವಿಧ ಇಲಾಖೆಗಳು, ಕಾಫಿ ಸಂಬಂಧಿತ ಅನೇಕ ಸಂಘಸಂಸ್ಥೆಗಳು, ಕಾಪಿ ಕೆಫೆಗಳು ಭಾಗವಹಿಸಲಿದೆ.
ಕೂರ್ಗ್ ಪ್ಲಾಂಟಸ್೯ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿತ ಎರಡನೇ ವಷ೯ದ ಕಾಫಿ ದಸರಾವನ್ನು ಸೆ.24 ರಂದು ಬುಧವಾರ ಬೆಳಗ್ಗೆ 10 ಗಂಟೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜ್ ಅವರು ಕಾಫಿ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ವೇದಿಕೆಯ ಕಾರ್ಯಕ್ರಮಗಳನ್ನು ಭಾರತೀಯ ಕಾಫಿ ಮಂಡಳಿಯ ಅಧ್ಯಕ್ಷ ದಿನೇಶ್ ದೇವವೖಂದ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ವಹಿಸಲಿದ್ದಾರೆ. ಮುಖ್ಮಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್ ಪೊನ್ನಣ್ಣ, ಸಂಸದ ಯದುವೀರ್ ಒಡೆಯರ್, ರಾಜ್ಯಸಭಾ ಸದಸ್ಯ ಅಜಯ್ ಮಾಕನ್ ಮತ್ತಿತರರು ಭಾಗವಹಿಸಲಿದ್ದಾರೆ.
ಕಾಫಿ ದಸರಾ ಅಂಗವಾಗಿ ಜಿಲ್ಲೆಯ 10 ಸಾಧಕ ಕೖಷಿಕರನ್ನು ಸನ್ಮಾನಿಸಲಾಗುವುದು ಎಂದು ಅನಿಲ್ ಹೆಚ್.ಟಿ. ತಿಳಿಸಿದ್ದಾರೆ.





