ಸುಳ್ಯ: ಸುಳ್ಯ ತಾಲೂಕಿನ ವಿವಿಧ ಗ್ರಾಮಗಳು ಹಾಗು ಗಡಿ ಗ್ರಾಮಗಳಲ್ಲಿ ಚಳಿಯ ವಾತಾವರಣ ಕಂಡು ಬಂದಿದೆ. ಒಂದೆರಡು ದಿನಗಳಿಂದ ಗ್ರಾಮೀಣ ಭಾಗದಲ್ಲಿ ಚುಮು ಚುಮು ಚಳಿಯ ಅನುಭವ ಉಂಟಾಗುತ್ತಿದೆ. ಬೆಳಗ್ಗಿನ ಜಾವ ಮಂಜು ಮುಸುಕಿದ ವಾತಾವರಣ ಚಳಿ ಇತ್ತು. ಡಿಸೆಂಬರ್ ಕೊನೆಯ ವಾರ ಹಾಗು ಜನವರಿ ಮೊದಲ ವಾರದಲ್ಲಿ ಸ್ವಲ್ಪ ಚಳಿಯ ವಾತಾವರಣ ಕಂಡು ಬಂದಿತ್ತು. ಆದರೆ ಬಳಿಕ ಮೋಡ
ಕವಿದ ವಾತಾವರಣ, ಮಳೆ ಇದ್ದ ಕಾರಣ ಚಳಿ ದೂರವಾಗಿತ್ತು.ಇದೀಗ ಮತ್ತೆ ಚಳಿಯ ವಾತಾವರಣ ಕಂಡು ಬಂದಿದೆ. ರಾಜ್ಯದ ವಿವಿಧ ಭಾಗದಲ್ಲಿ ಚಳಿ ಹೆಚ್ಚಳ ಆಗಿದೆ.

ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದೆ. ಚಳಿಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.





