ಪೆರುವಾಜೆ: ಬೆಳ್ಳಾರೆಯ ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗ, ವಾಣಿಜ್ಯ ಸಂಘ ಹಾಗೂ ಆಂತರಿಕ ಗುಣಮಟ್ಟ ಕೋಶದ ವತಿಯಿಂದ ರಾಜ್ಯ ಮಟ್ಟದ ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್ ಫೆಸ್ಟ್ “ಎಕ್ಸಲೆನ್ಷಿಯಾ 2025” ಅನ್ನು ವಿವಿಧ ಕಾಲೇಜುಗಳ ಸ್ನಾತಕ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.ಫೆಸ್ಟ್ನ ಉದ್ಘಾಟನೆಯನ್ನು
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ನೆರವೇರಿಸಿದರು. ಮುಖ್ಯ ಅತಿಥಿಗಳಾದ ಐರಿಸ್ ಇವೆಂಟ್ಸ್ ಆಂಡ್ ಡೆಕೊರ್, ಮಂಗಳೂರು ಇದರ ಆಡಳಿತ ನಿರ್ದೇಶಕಿ ಗುಣಶ್ರೀ ಉಮೇಶ್ ಕೊಟ್ಟೆಕಾಯ್ ಹಾಜರಿದ್ದರು. ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಾಲಸುಬ್ರಮಣ್ಯ ಪಿ.ಎಸ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗಾದ ಅಧ್ಯಕ್ಷೆ ಉಷಾ ಬಿ. ಭಟ್, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಸಚಿನ್ ರಾಜ್ ಶೆಟ್ಟಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಕ್ಷಿತ್ ಕುಮಾರ್ ಪೆರುವಾಜೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ರಾಜ್ಯ ಮಟ್ಟದ ಈ ಫೆಸ್ಟ್ನಲ್ಲಿ ರಾಜ್ಯದ ವಿವಿಧ ಪ್ರಥಮ ದರ್ಜೆ ಕಾಲೇಜುಗಳಿಂದ 14 ತಂಡಗಳು ಭಾಗವಹಿಸಿದ್ದವು. ಎಲ್ಲಾ ಚಟುವಟಿಕೆಗಳಿಂದ ಸಮಗ್ರ ಪ್ರಶಸ್ತಿಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಹಾಗೂ ದ್ವಿತೀಯ ಪ್ರಶಸ್ತಿಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು, ಪುಂಜಾಲಕಟ್ಟೆ ಪಡೆದುಕೊಂಡವು.





