ನವದೆಹಲಿ: ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 30.50 ರೂ. ಇಳಿಕೆಯಾಗಿದೆ. ಇನ್ನು 5ಕೆಜಿ ಎಫ್ಟಿಎಲ್ (ಫ್ರೀ ಟ್ರೇಡ್ ಎಲ್ಪಿಜಿ) ಸಿಲಿಂಡರ್ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ. ಈ ಪರಿಷ್ಕೃತ ದರ
ಇಂದು (ಏಪ್ರಿಲ್ 01) ರಿಂದಲೇ ಅನ್ವಯವಾಗಲಿದೆ. ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹಿಂದಿನ ತಿಂಗಳ ಅಂತರರಾಷ್ಟ್ರೀಯ ಮಾರುಕಟ್ಟೆಯ ಸರಾಸರಿ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ ಮೊದಲನೆಯ ದಿನ ಎಲ್ಪಿಜಿ ಬೆಲೆಯನ್ನು ಪರಿಷ್ಕರಿಸುತ್ತವೆ. ಗೃಹಬಳಕೆಯ ಗ್ಯಾಸ್ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.