ನವದೆಹಲಿ:ದೇಶದಲ್ಲಿ 19 ಕೆಜಿಯ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆಯಾಗಿದೆ ಕಂಡಿದ್ದು, ಪ್ರತಿ ಸಿಲಿಂಡರ್ನ ಬೆಲೆ 100 ರೂ ಹೆಚ್ಚಳವಾಗಿದೆ. ಕಳೆದ ಎರಡು ತಿಂಗಳಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಏರಿಕೆಯಾಗುತ್ತಿರುವುದು
ಇದು ಎರಡನೇ ಬಾರಿ. ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಬುಧವಾರ ದೇಶದ ವಿವಿಧ ಭಾಗಗಳಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 100ರೂಪಾಯಿಗೆ ಏರಿಸಿದೆ.19 ಕೆಜಿಯ ವಾಣಿಜ್ಯ ಸಿಲಿಂಡರ್ ಈಗ ದೆಹಲಿಯಲ್ಲಿ 1,731 ರೂ ಬದಲಿಗೆ 1,833 ರೂ. ಆಗಿದೆ.ಗೃಹ ಬಳಕೆಯ ಸಿಲಿಂಡರ್ ಬೆಲೆ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.









