ನವದೆಹಲಿ: ತೈಲ ಮಾರಾಟ ಕಂಪನಿಗಳು ಇಂದಿನಿಂದಲೇ (ಭಾನುವಾರ) ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ದರವನ್ನು 39 ಹೆಚ್ಚಿಸಿವೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ
19 ಕೆ.ಜಿ. ತೂಕದ ಸಿಲಿಂಡರ್ ದರವು 1,691ಕ್ಕೆ ಏರಿಕೆ ಆಗಿದೆ ಎಂದು ವರದಿಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಗಳು ತಿಳಿಸಿವೆ. 14.2 ಕೆ.ಜಿಯ ಗೃಹ ಬಳಕೆ ಸಿಲಿಂಡರ್ ದರವು ಯಥಾಸ್ಥಿತಿಯಲ್ಲಿದೆ.