ನವದೆಹಲಿ: ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು ಶುಕ್ರವಾರ ಪರಿಷ್ಕರಿಸಿವೆ ಎಂದು ವರದಿಯಾಗಿದೆ.
ವರದಿ ಪ್ರಕಾರ, 19 ಕೆ.ಜಿ. ವಾಣಿಜ್ಯ ಸಿಲಿಂಡರ್ ದರ 33.50ಯಷ್ಟು ಕಡಿಮೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ.ಗೃಹ ಬಳಕೆಯ 14.2 ಕೆ.ಜಿ. ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.














