ಸುಳ್ಯ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ – ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸುರು ಇದರ ವತಿಯಿಂದ ಒಂದು ತಿಂಗಳ ಉಚಿತ ಕಂಪ್ಯೂಟರ್ ತರಬೇತಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ಜೂ.14ರಂದು ಸುಳ್ಯದ ಶ್ರೀಹರಿ ಬಿಲ್ಡಿಂಗ್ ನ ಜ್ಞಾನಶ್ರೀ ಕಂಪ್ಯೂಟರ್
ತರಬೇತಿ ಕೇಂದ್ರದಲ್ಲಿ ನಡೆಯಿತು.ಸುಳ್ಯ ರೈತ ಉತ್ಪಾದಕರ ಕಂಪೆನಿ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್ ಉಚಿತ ಕಂಪ್ಯೂಟರ್ ತರಬೇತಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ಬ್ಯಾಂಕ್ ಆಫ್ ಬರೋಡ ಸುಳ್ಯ ಶಾಖೆಯ ವ್ಯವಸ್ಥಾಪಕ ಅಶೋಕ್ ವಿಮಾನ್, ಜ್ಞಾನಶ್ರೀ ಕಂಪ್ಯೂಟರ್ ತರಬೇತಿ ಕೇಂದ್ರದ ನಿರ್ದೇಶಕ ವೇಣುಗೋಪಾಲ ಬೆಟ್ಟಂಪಾಡಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿದರು.ಜಾಲ್ಸುರು ವಿಜಯ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಜ್ಞಾನಶ್ರೀ ಸಂಸ್ಥೆಯ ವಿದ್ಯಾರ್ಥಿನಿ ತ್ರಿವಿಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
ಪ್ರೀಮಾ ವಂದಿಸಿದರು.