ಸುಳ್ಯ:ಜಯನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಮಾದರಿ ಪ್ರಾಥಮಿಕ ಶಾಲೆಗೆ ದೃಷ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಂಪ್ಯೂಟರ್ ಕೊಡುಗೆ ಕಾರ್ಯಕ್ರಮ ನಡೆಯಿತು.ಶಾಲೆಯ ಹಿರಿಯ ವಿದ್ಯಾರ್ಥಿ, ಸಿನಿಮಾ ನಿರ್ಮಾಪಕ ಹಾಗೂ ನಿರ್ದೇಶಕ ದೃಷ್ಟಿ ಚಾರಿಟೇಬಲ್ ಟ್ರಸ್ಟ್ನ ಕಾರ್ಯದರ್ಶಿ ಸಂತೋಷ್ ಕೊಡಂಕೇರಿ ಮಾತನಾಡಿ ಶಿಕ್ಷಣ ಕೇಂದ್ರಗಳಿಗೆ
ಸಮಾಜದಿಂದ ಕೊಡುಗೆಗಳು ಬಂದಲ್ಲಿ ಅಂತಹ ಸಂಸ್ಥೆಗಳು ಅಭಿವೃದ್ಧಿಯ ಹಾದಿಯನ್ನು ಕಂಡುಕೊಳ್ಳುತ್ತದೆ. ದೃಷ್ಟಿ ಚಾರಿಟೇಬಲ್ ಟ್ರಸ್ಟ್ ಕಳೆದ 20 ವರ್ಷಗಳಿಂದ ಶಿಕ್ಷಣ ಸಂಸ್ಥೆಗಳಿಗೆ ಮತ್ತು ಸಮಾಜದಲ್ಲಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಹಾಯ ಹಸ್ತವನ್ನು ನೀಡುತ್ತಾ ಬಂದಿದೆ ಎಂದು ಹೇಳಿದರು.

ಶಾಲಾ ಮುಖ್ಯ ಶಿಕ್ಷಕಿ ವೀಣಾ, ಪತ್ರಕರ್ತ ಹಸೈನಾರ್ ಜಯನಗರ ಮಾತನಾಡಿದರು. ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕಿ ವೀಣಾ ಸ್ವಾಗತಿಸಿ ಶಿಕ್ಷಕಿ ಮಮತಾ ವಂದಿಸಿದರು.







