ಸುಳ್ಯ:ಸುಳ್ಯ ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಕೆಳ ಭಾಗವಾಗಿ ಸರಕಾರಿ ಪದವಿಪೂರ್ವ ಕಾಲೇಜಿನ ಕಡೆಗೆ ತೆರಳುವ ರಸ್ತೆಯಲ್ಲಿ ವಿದ್ಯುತ್ ಕಂಬಗಳನ್ನು ಸೇರಿಸಿ ಕಾಂಕ್ರೀಟೀಕರಣ ಮಾಡಿರುವುದು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಕಾಂಕ್ರೀಟ್ ರಸ್ತೆಯಲ್ಲಿದ್ದ ವಿದ್ಯುತ್ ಕಂಬಗಳನ್ನು ತೆರವು ಮಾಡಲಾಗಿದೆ.ಈ ರಸ್ತೆಯಲ್ಲಿ
ಕೆಲವು ಭಾಗ ಇತ್ತೀಚೆಗೆ ಕಾಂಕ್ರೀಟ್ ಮಾಡಲಾಗಿದೆ. ಆದರೆ ಕಾಂಕ್ರೀಟ್ ನಡೆದ ಭಾಗದಲ್ಲಿ ಇದ್ದ ವಿದ್ಯುತ್ ಕಂಬವನ್ನು ಸ್ಥಳಾಂತರ ಮಾಡದೆ ವಿದ್ಯುತ್ ಕಂಬವನ್ನು ಸೇರಿಸಿ ಕಾಂಕ್ರೀಟ್ ಮಾಡಿ ರಸ್ತೆ ಅಭಿವೃದ್ಧಿ ಪಡಿಸಲಾಗಿತ್ತು.ಕಂಬವನ್ನು ಹಾಗೆಯೇ ಉಳಿಸಿ ಅಗಲೀಕರಣ ಮಾಡಿ ಕಾಂಕ್ರೀಟ್ ಮಾಡಲಾಗಿದ್ದು ಅಪಘಾತ ಸಂಭವಿಸುವ ಸಾಧ್ಯತೆ ಇದೆ ಎಂದು ಸವಾರರು ಆತಂಕ ವ್ಯಕ್ತಪಡಿಸಿದ್ದರು. ಇದು ವಿವಾದವಾಗಿ

ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿತ್ತು.ಕಂಬ ತೆರವು ಮಾಡಲು ಶಾಸಕಿ ಭಾಗೀರಥಿ ಮುರುಳ್ಯ, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದೀಗ ಕಂಬಗಳನ್ನು ತೆರವು ಮಾಡಿ ಬೇರೆ ಕಂಬ ಅಳವಡಿಸಿ ಲೈನ್ ಬದಲಿಸಲಾಗಿದೆ. ರಸ್ತೆಯ ವಿದ್ಯುತ್ ಕಂಬ ಭಾರೀ ವೈರಲ್ ಆಗಿ ಸಾಕಷ್ಟು ಟ್ರೋಲ್ ಆಗಿತ್ತು.








