ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಎರಡನೇ ಪಟ್ಟಿ ಪ್ರಕಟಿಸಿದ್ದು, 43 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು , ಮಂಗಳವಾರ ಪ್ರಕಟಿಸಿದೆ.ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪಟ್ಟಿ ಬಿಡುಗಡೆ ಮಾಡಿದರು. ಈ ಪಟ್ಟಿಯಲ್ಲಿ ಕರ್ನಾಟಕದ ಯಾವ
ಕ್ಷೇತ್ರವನ್ನೂ ಹೆಸರಿಸಿಲ್ಲ. ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಪುತ್ರ ಗೌರವ್ ಗೊಗೊಯ್, ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪುತ್ರ ವೈಭವ್ ಗೆಹ್ಲೋಟ್ ಮತ್ತು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಪುತ್ರ ನಕುಲ್ ನಾಥ್ ಅವರಿಗೆ ಟಿಕೆಟ್ ನೀಡಲಾಗಿದೆ.
ಅಸ್ಸಾಂನಿಂದ 13, ಮಧ್ಯಪ್ರದೇಶದಿಂದ 10, ರಾಜಸ್ಥಾನದಿಂದ 10, ಗುಜರಾತ್ನಿಂದ 7 ಮತ್ತು ಉತ್ತರಾಖಂಡದಿಂದ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ.









