ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಾಕಿ ಉಳಿದಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ
ಅಭ್ಯರ್ಥಿ ಘೋಷಿಸಿದ್ದು, ಕೋಲಾರ ಕ್ಷೇತ್ರದ ಟಿಕೆಟ್ ಕಾಯ್ದಿರಿಸಿದೆ. ಬಳ್ಳಾರಿ ಲೋಕಸಭಾ ಟಿಕೆಟ್ ಇ ತುಕರಾಂ, ಚಾಮರಾಜನಗರ ಕ್ಷೇತ್ರದ ಟಿಕೆಟ್ ಸಚಿವ ಎಚ್ಸಿ ಮಹಾದೇವಪ್ಪ ಪುತ್ರ ಸುನೀಲ್ ಬೋಸ್ಗೆ ನೀಡಲಾಗಿದೆ. ಎಂ.ಎಸ್.ರಾಮಯ್ಯನವರ ಮೊಮ್ಮಗ ರಕ್ಷಾ ರಾಮಯ್ಯ ಅವರಿಗೆ ಚಿಕ್ಕಬಳ್ಳಾಪುರ ಟಿಕೆಟ್ ನೀಡಲಾಗಿದೆ. ಇದರೊಂದಿಗೆ ಕಾಂಗ್ರೆಸ್ ಒಟ್ಟು 28 ಕ್ಷೇತ್ರಗಳಲ್ಲಿ 27 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು, ಕೋಲಾರ ಒಂದು ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿದೆ.