ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ವತಿಯಿಂದ ಬೂತ್ ಮಟ್ಟದ ಪ್ರಚಾರ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಏ.27 ಮತ್ತು 28 ರಂದು ಎರಡು ದಿನದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರತಿ ಮನೆಯನ್ನು ಮುಟ್ಟುವ ಆ ಮೂಲಕ ಪ್ರಚಾರಕ್ಕೆ ಚುರುಕು ಮುಟ್ಟಿಸಲು ಅಭಿಯಾನ ಹಮ್ಮಿಕೊಳ್ಳಲಾಗಿದೆ. ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸೇರಿದಂತೆ ಎಲ್ಲಾ
ನಾಯಕರು ತಮ್ಮ ಬೂತ್ಗಳಲ್ಲಿ ಪ್ರಚಾರ ನಡೆಸಬೇಕು. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿ ಮತ ಯಾಚನೆ ಮಾಡಿ ಪ್ರಚಾರ ಕೈಗೊಳ್ಳಲಾಯಿತು. ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ರಾಮಕುಂಜ ಬೂತ್ನಲ್ಲಿ ಕಾರ್ಯಕರ್ತರ ಜೊತೆ ಪ್ರಚಾರ ಕೈಗೊಂಡರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಅವರು ಶ್ರೀರಾಮ ಪೇಟೆ ವಾರ್ಡಿನಲ್ಲಿ ಮನೆ ಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣಾ
ಅಭಿಯಾನ ನಡೆಸಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಮಡಪ್ಪಾಡಿಯಲ್ಲಿ ಪ್ರಚಾರ ಕೈಗೊಂಡರು.ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ದೇವಚಳ್ಳದಲ್ಲಿ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್ ಗೂನಡ್ಕ ಬೂತ್ನಲ್ಲಿ ಪ್ರಚಾರ ಮಾಡಿದರು. ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ ಸೇರಿದಂತೆ ಎಲ್ಲಾ ಮುಖಂಡರು ತಮ್ಮ ಬೂತ್ಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ನಾಯಕರ ಜೊತೆ ಕಾರ್ಯಕರ್ತರು ಸಾಥ್ ನೀಡಿದರು.