ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ವತಿಯಿಂದ ಬೂತ್ ಮಟ್ಟದ ಪ್ರಚಾರ ಅಭಿಯಾನ ಕಾರ್ಯಕ್ರಮ ಕೂಡ ಮುಂದುವರಿಯಿತು. ವಿಧಾನಸಭಾ ಕ್ಷೇತ್ರದ ಪ್ರತಿ ಮನೆಯನ್ನು ಮುಟ್ಟುವ
ಅಭಿಯಾನ, ಗ್ಯಾರಂಟಿ ಕಾರ್ಡ್ ವಿತರಣೆ ನಡೆಯಿತು. ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಜಿ.ಕೃಷ್ಣಪ್ಪ ಕಾಣಿಯೂರು,ಬೆಳಂದೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಪ್ರಚಾರ ಕೈಗೊಂಡರು. ನಾಯಕರು, ಪ್ರಮುಖರು, ಕಾರ್ಯಕರ್ತರು ತಮ್ಮ ಬೂತ್ಗಳಲ್ಲಿ ಪ್ರಚಾರ ಮುಂದುವರಿಸಿದರು. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿ ಮತ ಯಾಚನೆ ಮಾಡಿ ಪ್ರಚಾರ ಕೈಗೊಳ್ಳಲಾಯಿತು.