ಮಂಡ್ಯ: ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ 100ಕ್ಕೂ ಹೆಚ್ಚು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯು ಮಾರ್ಚ್ 22 ರಂದು ಬಿಡುಗಡೆಯಾಗಲಿದೆ.ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಅಮಾವಾಸ್ಯೆ ಪೂಜೆ ಅಂಗವಾಗಿ
ನಾಗಮಂಗಲ ತಾಲ್ಲೂಕು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದ ಅವರು ಡಾ.ನಿರ್ಮಲಾನಂದನಾಥ ಸ್ವಾಮೀಜಿ ಜೊತೆ ಮಾತುಕತೆ ನಡೆಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
ಈ ವರ್ಷ ರಾಜ್ಯದಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂದರು.
ರಾಹುಲ್ ಗಾಂಧಿ ಅವರ ರಾಜ್ಯ ಭೇಟಿಯ ಬಳಿಕ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಈ ಹಿಂದೆ ಘೋಷಣೆ ಮಾಡಿದ್ದೇವೆ. ಅದರಂತೆ ಯುಗಾದಿ ದಿನದಂದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಲಿದೆ ಎಂದು ಅವರು ಹೇಳಿದರು.