ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಪದ್ಮರಾಜ್ ಅವರ ಹೆಸರು ಫೈನಲ್ ಆಗಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಅಭ್ಯರ್ಥಿತನಕ್ಕೆ ಹಲವು ಹೆಸರುಗಳು ಕೇಳಿ ಬಂದಿದ್ದರೂ ಪದ್ಮರಾಜ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್
ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಅವರ ಹೆಸರು ಅಂತಿಮಗೊಳಿಸಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ನಾಳೆ ಅಭ್ಯರ್ಥಿ ಘೋಷಣೆ ಆಗಬಹುದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿದೆ. ಮಂಗಳೂರಿನಲ್ಲಿ ವಕೀಲರಾಗಿರುವ ಪದ್ಮರಾಜ್ ಅವರು ಕುದ್ರೋಳಿ ಗೋಕರ್ಣನಾಥೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಕೊಶಾಧಿಕಾರಿಯಾಗಿದ್ದಾರೆ.









