ಸುಳ್ಯ:ವಿಧಾನ ಪರಿಷತ್ನ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹಾಗೂ ವಿಧಾನ ಪರಿಷತ್ನ ನೈರುತ್ಯ ಶಿಕ್ಷಕ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ.ಮಂಜುನಾಥ್ ಸುಳ್ಯದಲ್ಲಿ ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡರು. ಕೆವಿಜಿ ಕ್ಯಾಂಪಸ್ನಲ್ಲಿ ಚುನಾವಣಾ ಪ್ರಚಾರ ಕೈಗೊಂಡ
ಅವರು ಕೆವಿಜಿ ಇಂಜಿನಿಯರಿಂಗ್ ಕಾಲೇಜು, ಕೆವಿಜಿ ಡೆಂಟಲ್ ಕಾಲೇಜು, ಕೆವಿಜಿ ಪಾಲಿಟೆಕ್ನಿಕ್, ಅಮರ ಜ್ಯೋತಿ ಪದವಿಪೂರ್ವ ಕಾಲೇಜು, ಕೆವಿಜಿ ಐಪಿಎಸ್, ಕೆವಿಜಿ ಮೆಡಿಕಲ್ ಕಾಲೇಜು, ಕೆವಿಜಿ ಆಯುರ್ವೇದ ಕಾಲೇಜು, ನೆಹರೂ ಸ್ಮಾರಕ ಮಹಾ ವಿದ್ಯಾಲಯ ಸೇರಿದಂತೆ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿ ಮತ ಯಾಚನೆ ನಡೆಸಿದರು. ಸುಳ್ಯದಲ್ಲಿ ದಿನ ಪೂರ್ತಿ ಪ್ರಚಾರ ನಡೆಸಿದ ಅವರು ವಿವಿಧ ಶಾಲಾ ಕಾಲೇಜು ಸೇರಿದಂತೆ ವಿವಿಧ ಕಡೆ ಭೇಟಿ ನೀಡಿ ಪ್ರಚಾರ ಕಾರ್ಯ ಕೈಗೊಂಡರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಮುಸ್ತಫ, ಎನ್.ಜಯಪ್ರಕಾಶ್ ರೈ, ಎಸ್.ಸಂಶುದ್ದೀನ್, ವಿಧಾನ ಪರಿಷತ್ ಉಸ್ತುವಾರಿ ಪ್ರದೀಪ್ಕುಮಾರ್ ರೈ ಪಾಂಬಾರು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಮುಖಂಡರಾದ ಎಂ.ವೆಂಕಪ್ಪ ಗೌಡ, ಶರೀಫ್ ಕಂಠಿ, ಮೂಸ ಪೈಂಬೆಚ್ಚಾಲ್ ಮತ್ತಿತರರು ಉಪಸ್ಥಿತರಿದ್ದರು.