ಸಂಪಾಜೆ:ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಒಂದನೇ ವಾರ್ಡಗ ನೆಲ್ಲಿಕುಮೇರಿಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸಿ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರ ಪರ ಮತ ಯಾಚಿಸಲಾಯಿತು.ಈ ಸಂದರ್ಭದಲ್ಲಿ
ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ, ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಲಿಸ್ಸಿ ಮೊನಾಲಿಸಾ, ಸದಸ್ಯರಾದ ಸುಮತಿ ಶಕ್ತಿವೇಲು, ದ.ಕ.ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಜ್ಞಾನಶೀಲನ್ ನೆಲ್ಲಿಕುಮೇರಿ, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಉಪಾಧ್ಯಕ್ಷರಾದ ಎ.ಕೆ.ಇಬ್ರಾಹಿಂ, ಪ್ರಮುಖರಾದ ಸಿಲ್ವಸ್ಟರ್ ಡಿ’ಸೋಜಾ, ನಾಗಮುತ್ತು, ಸೆಬಾಸ್ಟಿಯನ್ ನೆಲ್ಲಿಕುಮೇರಿ, ಕೆರೋಲಿನ್ ಕ್ರಾಸ್ತಾ ಉಪಸ್ಥಿತರಿದ್ದರು.