ಸುಳ್ಯ: ಕೆಂಪು ಕಲ್ಲು ಮತ್ತು ಮರಳು ಅಭಾವದ ವಿರುದ್ಧ ಸುಳ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ ಯವರು ಪುತ್ತೂರು ಶಾಸಕರಾಗಿರುವ ಅಶೋಕ್ ರೈ ವಿರುದ್ಧ ಏಕವಚನ ಬಳಸಿ ಮಾತನಾಡಿದ್ದಾರೆ, ಕಾಂಗ್ರೆಸ್ ಕಾರ್ಯಕರ್ತರನ್ನು ನಿಂದಿಸಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಂದು
ಸುಳ್ಯ ಪೋಲೀಸರಿಗೆ ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ.
ಜು. 14ರಂದು ಸುಳ್ಯ ಖಾಸಗಿ ಬಸ್ಸು ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ ಹಾಗೂ ಇನ್ನಿತರ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರು ಹಾಗೂ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಆದುರಿಂದ ತಾವು ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ನಾಯಕರಾದ ರಾಧಾಕೃಷ್ಣ ಬೊಳ್ಳೂರು, ಕೆ.ಎಂ.ಮುಸ್ತಫ, ಶಾಹುಲ್ ಹಮೀದ್ ಕುತ್ತಮೊಟ್ಟೆ, ಕೆ.ಗೋಕುಲ್ ದಾಸ್, ಶಾಫಿ ಕುತ್ತಮೊಟ್ಟೆ, ರಾಜು ಪಂಡಿತ್, ರಾಧಾಕೃಷ್ಣ ಪರಿವಾರಕಾನ, ಸುರೇಶ್ ಎಂ.ಹೆಚ್., ಚೇತನ್ ಕಜೆಗದ್ದೆ, ಶಶಿಧರ ಎಂ.ಜೆ, ಭವಾನಿಶಂಕರ ಕಲ್ಮಡ್ಕ, ಶಿವಕುಮಾರ್ ಕಂದಡ್ಕ, ಮೊದಲಾದವರು ಇದ್ದರು.














