ಸುಳ್ಯ:ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಬಾರಿ ಸುಳ್ಯ ತಾಲೂಕು ಪಂಚಾಯತ್ ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರ ನಿಯೋಗ ಸಿಇಒ ಅವರನ್ನು ಭೇಟಿ ಮಾಡಿ ಸುಳ್ಯ ತಾಲೂಕಿನ ವಿವಿಧ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದರು.ಗ್ರಾಮ ಪಂಚಾಯತ್ ಮತ್ತು
ತಾಲೂಕು ಪಂಚಾಯತ್ ನಲ್ಲಿ ಸಿಬ್ಬಂದಿ ಕೊರತೆ, 94ಸಿಸಿ ಹಕ್ಕುಪತ್ರಗಳಿಗೆ 9/11 ಸಮಸ್ಯೆ, ಗ್ರಾಮೀಣ ಭಾಗದಲ್ಲಿ ರಸ್ತೆ ಕಾಮಗಾರಿಗಳಿಗೆ ಅರಣ್ಯ ಇಲಾಖೆಯ ನಿಯಮಗಳಿಂದ ಆಗುವ ಸಮಸ್ಯೆಗಳ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ಅವರ ಗಮನಕ್ಕೆ ತರಲಾಯಿತು. ಅಲ್ಲದೆ ಸುಳ್ಯದ ಹಲವಾರು ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಚರ್ಚಿಸಿದರು. ಸಿಬ್ಬಂದಿ ಕೊರತೆ ಮತ್ತು 9/11 ಬಗ್ಗೆ ಆಡಳಿತಾತ್ಮಕವಾಗಿ ಶೀಘ್ರ ಪರಿಹಾರ ಕೈಗೊಳ್ಳುವುದಾಗಿ ಸಿಇಒ ಪ್ರತಿಕ್ರಿಯಿಸಿದರು. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಬರುವ ತೊಡಕುಗಳನ್ನು ಇತರ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಪರಿಹರಿಸಲು ಪ್ರಯತ್ನಿಸುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್,ಡಿಸಿಸಿ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಭವಾನಿಶಂಕರ್ ಕಲ್ಮಡ್ಕ, ಮೆಸ್ಕಾಂ ಸಲಹಾ ಸಮಿತಿ ಸದಸ್ಯ, ಸತ್ಯಕುಮಾರ್ ಆಡಿಂಜಾ, ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷ ಗೋಕುಲ್ ದಾಸ್ ಉಪಸ್ಥಿತರಿದ್ದರು. ತಾಲೂಕು ಪಂಚಾಯತ್ ಇ ಓ ರಾಜಣ್ಣ, ಇಲಾಖಾಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.





