ಸುಳ್ಯ:ಸುಳ್ಯ 110 ಕೆ.ವಿ ಕಾಮಗಾರಿಯನ್ನು ತುರ್ತಾಗಿ ನಿರ್ವಹಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರನ್ನು ಕಾಂಗ್ರೆಸ್ ನಿಯೋಗ ವಿಧಾನಸೌಧದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಕಾಮಗಾರಿಯನ್ನು ಕೂಡಲೇ ಪೂರ್ತಿಗೊಳಿಸುವಂತೆ ಸೂಚಿಸುತ್ತೇನೆ ಎಂದು ಭರವಸೆ ನೀಡಿರುತ್ತಾರೆ. ಇದೇ ಸಂದರ್ಭದಲ್ಲಿ
ಕಲ್ಮಡ್ಕ ಗ್ರಾಮದ ಕುಳಾಯಿತೋಡಿ ಹಾಗೂ ಸಂಪಾಜೆ ಎಂಬಲ್ಲಿಯ 33 ಕೆ ವಿ ಹೊಸ ಸಬ್ ಸ್ಟೇಷನ್ ನಿರ್ಮಾಣದ ಬಗ್ಗೆಯೂ ಸಚಿವರ ಗಮನಕ್ಕೆ ತರಲಾಯಿತು. ಈ ಬಗ್ಗೆ ಕೂಡಲೇ ಕಾಮಗಾರಿಯನ್ನು ಕೈಗೊತ್ತಿಕೊಳ್ಳಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ಸುಳ್ಯ ನಗರ ಪಂಚಾಯತ್ ಸದಸ್ಯ ಎಂ. ವೆಂಕಪ್ಪಗೌಡ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಸರಸ್ವತಿ ಕಾಮತ್, ರಾಜ್ಯಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯ ಕೆ.ಪಿ. ಜಾನಿ, ಅಬ್ದುಲ್ ಗಫೂರ್ ಕಲ್ಮಡ್ಕ, ಸೋಮಶೇಖರ ಕೊಯಿಂಗಾಜೆ ಮೊದಲಾದವರು ಉಪಸ್ಥಿತರಿದ್ದರು.












