ಹಾವೇರಿ:ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1000 ದಿನಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಹಾವೇರಿ ನಗರದ ಹೊರವಲಯದ ಅಜ್ಜಯ್ಯ ದೇವಸ್ಥಾನದ ಆವರಣದಲ್ಲಿ ಬೃಹತ್ ಸಾಧನಾ ಸಮಾವೇಶ ಮತ್ತು ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ ಆಯೋಜಿಸಲಾಯಿತು.ಸಾಧನಾ ಸಮಾವೇಶ ಮತ್ತು ಒಂದು ಲಕ್ಷ ಮಂದಿ ಫಲಾನುಭವಿಗಳಿಗೆ
ಹಕ್ಕು ಪತ್ರ ನೀಡುವ ಕಾರ್ಯಕ್ರಮದನ್ವಯ
ರಾಜ್ಯದ 9 ಜಿಲ್ಲೆಗಳ ಸುಮಾರು ಒಂದು ಲಕ್ಷ ಕುಟುಂಬಗಳಿಗೆ ಭೂಮಿಯ ಹಕ್ಕು ಪತ್ರಗಳನ್ನು ವಿತರಿಸುವ ಯೋಜನೆ ಹಮ್ಮಿಕೊಳ್ಳಲಾಗಿತ್ತು.
ಸಿರಿಧಾನ್ಯಗಳ ನಾಮಫಲಕದ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ವೇಳೆ ‘ಭೂ ಗ್ಯಾರಂಟಿ’ ಪುಸ್ತಕ ಬಿಡುಗಡೆ ಹಾಗೂ ಉತ್ತಮ ಕೆಲಸ ಮಾಡಿದ ತಹಶೀಲ್ದಾರ್ಗಳಿಗೆ ಸನ್ಮಾನ ಮಾಡಲಾಯಿತು.
ಸಮಾವೇಶದಲ್ಲಿ ಸಚಿವರಾದ ಕೃಷ್ಣ ಭೈರೇಗೌಡ, ಶಿವಾನಂದ ಪಾಟೀಲ್, ಹೆಚ್.ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಡಾ.ಜಿ.ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ವಿಧಾನ ಪರಿಷತ್ತಿನಲ್ಲಿ ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹಾಗೂ 20 ಕ್ಕೂ ಹೆಚ್ಚು ಮಂದಿ ಶಾಸಕರುಗಳು ಮತ್ತು ಮುಖಂಡರುಗಳು, ನಾಯಕರು ಉಪಸ್ಥಿತರಿದ್ದರು.













