ಸುಳ್ಯ:ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ಗೆ ಜನರು ಅಭೂತಪೂರ್ವ ಪ್ರತಿಕ್ರಿಯೆ ನೀಡುತ್ತಾರೆ ಇದ್ದಾರೆ ಜನರು ಬಿಜೆಪಿ ಸರ್ಕಾರದ ಆಡಳಿತದಿಂದ ಜನರು ರೋಸಿ ಹೋಗಿದ್ದಾರೆ ಎಂದು ಕೆಪಿಸಿಸಿ ಸದಸ್ಯ ನಂದಕುಮಾರ್ ಹೇಳಿದ್ದಾರೆ. ಅವರು ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ವಿವಿಧ ಕಡೆಗಳಲ್ಲಿ
ಮನೆ ಮನೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಿ ಮಾತನಾಡಿದರು. ಹಿಂದೆ ಸಿದ್ಧರಾಮಯ್ಯ ಸರಕಾರ ಕೊಟ್ಟ ಎಲ್ಲಾ ಭರವಸೆಗಳನ್ನೂ ಈಡೇರಿಸಿದೆ. ಈ ಬಾರಿಯೂ ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಹಲವು ಘೋಷಣೆಗಳನ್ನು ನೀಡಿದೆ ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಖಂಡಿತವಾಗಿಯೂ ಈ ಯೋಜನೆಗಳನ್ನು ಜಾರಿಗೆ ತರುತ್ತಾರೆ ಎಂದು ಅವರು ಹೇಳಿದರು.ರಾಜ್ಯದ ಎಲ್ಲಾ ಕಡೆ ಕಾಂಗ್ರೆಸ್ ಅಭೂತಪೂರ್ವ ಬೆಂಬಲ ಸಿಗುತ್ತಿದೆ ಎಂದು ಅವರು ಹೇಳಿದರು