ಸುಳ್ಯ: ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪ್ರಯತ್ನ ನಡೆಸಿಲ್ಲ ಎಂದು ಕೆಪಿಸಿಸಿ ಶಿಸ್ತು ಸಮಿತಿಯಿಂದ ಶೋಕಾಸ್ ನೋಟೀಸ್ ಪಡೆದ ನಾಯಕರು ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಶಿಸ್ತು ಸಮಿತಿ ಶೋಕಾಸ್ ನೋಟೀಸ್

ನೀಡಲಾದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ,ಕೆಪಿಸಿಸಿ ಸದಸ್ಯ ಹೆಚ್.ಎಂ.ನಂದಕುಮಾರ್ ಹಾಗೂ ಇತರ ಮುಖಂಡರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಸುಳ್ಯ ಕ್ಷೇತ್ರದಲ್ಲಿ ಪಕ್ಷದಲ್ಲಿ ಉಂಟಾದ ಬೆಳವಣಿಗೆಯ ತಿಳಿಸಿದ್ದಾರೆ. ಸುಳ್ಯ ಹಾಗೂ ಕಡಬ ಕ್ಷೇತ್ರದಲ್ಲಿನ 17 ಮಂದಿ ಕಾಂಗ್ರೆಸ್ ಮುಖಂಡರನ್ನು ಅಮಾನತು ಮಾಡಿ ಕೆಲವು ಮುಖಂಡರಿಗೆ ಶೋಕಾಸ್ ನೀಡಿದ್ದು ಸುಳ್ಯ ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಠಿಸಿತ್ತು.
ಇತ್ತೀಚೆಗಿನ ದಿನಗಳಲ್ಲಿ ನಡೆಯುತ್ತಿರುವ ವಿದ್ಯಾಮಾನವನ್ನು ಸಂಪೂರ್ಣವಾಗಿ ತಿಳಿಸಲಾಯಿತು ಅಧ್ಯಕ್ಷರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಈಗಾಗಲೆ ಅಮಾನತುಗೊಳಿಸಿದ ಎಲ್ಲಾ ಕಾರ್ಯಕರ್ತರ ಅಮಾನತು ರದ್ದು ಗೊಳಿಸುವಂತೆ ಸೂಚಿಸಿ ಶಿಸ್ತು ಸಮಿತಿ ಅಧ್ಯಕ್ಷರಿಗೆ ನಿರ್ದೇಶನ ನೀಡಿರುತ್ತಾರೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ತಿಳಿಸಿದ್ದಾರೆ.
ಡಾ.ರಘು, ಹೆಚ್.ಎಂ. ನಂದಕುಮಾರ್ ಮಡಿಕೇರಿ ಉಪಸ್ತಿತರಿದ್ದರು.