ಸುಳ್ಯ:ಸುಳ್ಯ ಕಾಂಗ್ರೆಸ್ ಮುಖಂಡರು ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರನ್ನು ಭೇಟಿಯಾಗಿ ಮಳೆಗಾಲದ ತುರ್ತು ಸಮಸ್ಯೆ ಪರಿಹಾರ ಮತ್ತು ವಿಪತ್ತು ನಿರ್ವಹಣೆ ಬಗ್ಗೆ ಚರ್ಚಿಸಿದರು. ಕರ್ನಾಟಕ ಸರಕಾರ ಯಾವುದೇ ಸಂದರ್ಭದಲ್ಲಿಯೂ ಜನತೆಯ ಹಿತಕ್ಕಾಗಿ ಕಟ್ಟಿಬದ್ದವಾಗಿದೆ. ಮಳೆಗಾಲದ ತುರ್ತು ಕಾರ್ಯಗಳನ್ನು ನಿರ್ವಹಣೆಯ ಬಗ್ಗೆ
ಚರ್ಚೆ ಸಲಹೆ ಮತ್ತು ಸಹಕಾರಕ್ಕೆ ಸರಕಾರದಿಂದ ನಾಮನಿರ್ದೇಶಿತ ಪ್ರಮುಖ ಪ್ರತಿನಿಧಿಗಳನ್ನು ಸೇರಿಸಿಕೊಂಡು ಸಭೆ ನಡೆಸುವಂತೆ ಸಲಹೆ ನೀಡಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಸೂಡ ಅಧ್ಯಕ್ಷ ಕೆ ಎಂ ಮುಸ್ತಫಾ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಭವಾನಿಶಂಕರ್ ಕಲ್ಮಡ್ಕ, ಕೆಡಿಪಿ ಸದಸ್ಯ ಜಯಪ್ರಕಾಶ್ ನೆಕ್ರಪ್ಪಾಡಿ, ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷ ಗೋಕುಲ್ದಾಸ್, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ ಜೆ, ಮೆಸ್ಕಾಂ ಸಲಹಾ ಸಮಿತಿ ಸದಸ್ಯ ನಂದರಾಜ್ ಸಂಕೇಶ್, ವಿಜಯಕುಮಾರ್ ಆಲೆಟ್ಟಿ ಉಪಸ್ಥಿತರಿದ್ದರು.