ಹೊಸದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಮತ್ತೆ ಹತ್ತು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಜೆಎನ್ಯು ವಿದ್ಯಾರ್ಥಿ ಯೂನಿಯನ್ನ ಮಾಜಿ
ಅಧ್ಯಕ್ಷ, ಎನ್ಎಸ್ಯುಐನ ಮುಖ್ಯಸ್ಥರಾದ ಕನ್ಹಯ್ಯ ಕುಮಾರ್ ಈಶಾನ್ಯ ದಿಲ್ಲಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.ವಾಯುವ್ಯ ದಿಲ್ಲಿ ಲೋಕಸಭಾ ಕ್ಷೇತ್ರದಿಂದ ಉದಿತ್ ರಾಜ್ ಸ್ಪರ್ಧಿಸಲಿದ್ದರೆ, ಚಾಂದಿನಿ ಚೌಕ್ ಲೋಕಸಭಾ ಕ್ಷೇತ್ರದಿಂದ ಜೆ.ಪಿ.ಅಗರ್ವಾಲ್ ಅಭ್ಯರ್ಥಿಯಾಗಿದ್ದಾರೆ. ಪಂಜಾಬ್ನ ಮಾಜಿ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಜಲಂಧರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.