ಸುಳ್ಯ: ಚಿನ್ನಾಭರಣ ಕಳ್ಳತನ ನಡೆದ ಕನಕಮಜಲು ಬುಡ್ಲೆಗುತ್ತು ಮನೆಗೆ ಕೆಪಿಸಿಸಿ ಸಂಯೋಜಕ ಜಿ.ಕೃಷ್ಣಪ್ಪ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ನಿಯೋಗ ಭೇಟಿ ನೀಡಿದರು. ಮನೆಯವರ ಜೊತೆ ಮಾತುಕತೆ ನಡೆಸಿ ಧೈರ್ಯ ತುಂಬಿದ್ದಾರೆ. ಪೊಲೀಸ್ ಇಲಾಖೆ ಕೂಡಲೇ ಪ್ರಕರಣವನ್ನು ಭೇಧಿಸಿ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಒತ್ತಾಯಿಸಿದೆ.ಕೆಪಿಸಿಸಿ ಸಂಯೋಜಕ ಜಿ.ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಸುರೇಶ್ ಎಂ.ಎಚ್, ದಿನೇಶ್ ಮಡ್ತಿಲ, ಕೀರ್ತನ್ ಕೊಡಪಾಲ ಮತ್ತಿತರರು ಇದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.