ಸುಳ್ಯ :ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆಎಸ್ಆರ್ಟಿ ಸಿ ಅಧಿಕಾರಿಗಳನ್ನು ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ಮಡಪಾಡಿಗೆ ಸಂಜೆ ಬಸ್ ಸಂಚಾರ ಆರಂಭಿಸುವಂತೆ ಮತ್ತು ಅಲ್ಲೇ ವಾಸ್ತವ್ಯ ಇದ್ದು ಮರುದಿನ ಬೆಳಿಗ್ಗೆ ಬಸ್ ಸಂಚಾರ ಆರಂಭಿಸುವಂತೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮನವಿಯನ್ನು ನೀಡಲಾಯಿತು. ಇದಕ್ಕೆ ಸ್ಪಂದಿಸಿದ
ಅಧಿಕಾರಿಗಳು ಸಂಜೆ 6.15 ಕ್ಕೆ ಮಡಪಾಡಿಗೆ ಬಸ್ ಸಂಚಾರ ಆರಂಭಗೊಳ್ಳಲಿದೆ ಮತ್ತು ಅದೇ ಬಸ್ ಮಡಪಾಡಿಯಲ್ಲಿ ವಾಸ್ತವ್ಯ ಇದ್ದು ಮರುದಿನ ಬೆಳಗ್ಗೆ 7.15 ಕ್ಕೆ ಹೊರಡಲು ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದರು. ಅಲ್ಲದೆ ಇನ್ನು ಕೆಲವೇ ಕೆಲವು ದಿನಗಳಲ್ಲಿ ಆಲೆಟ್ಟಿ ಗ್ರಾಮದ ಬಡ್ಡಡ್ಕಕೆ, ಮತ್ತು ಬೆಳಿಗ್ಗೆ 7 ಗಂಟೆಯಿಂದ ಸುಬ್ರಹ್ಮಣ್ಯದಿಂದ ಹೊರಟು ದುಗಲಡ್ಕ ಮೂಲಕ ಕೊಡಿಯಾಲಬೈಲು ಮೂಲಕ ಸುಳ್ಯ ಬಸ್ ಸಂಚಾರ ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಸಿ ಜಯರಾಮ, ಪ್ರಧಾನ ಕಾರ್ಯದರ್ಶಿ ಪಿ.ಎಸ್. ಗಂಗಾಧರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸುಳ್ಯ ತಾಲೂಕು ಪಂಚಾಯತ್ ಕೆಡಿಪಿ ಸದಸ್ಯರಾದ ಧರ್ಮಪಾಲ ಕೊಯಿಂಗಾಜೆ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನಗಳ ಸಮಿತಿ ಸದಸ್ಯರಾದ ಸೋಮಶೇಖರ ಕೇವಳ ಉಪಸ್ಥಿತರಿದ್ದರು.





