ಸುಳ್ಯ:ಈ ಬಾರಿಯ ಚುನಾವಣೆ ರಾಜ್ಯದ ಭವಿಷ್ಯದ ದೃಷ್ಠಿಯಿಂದ ಬಹಳ ಮುಖ್ಯವಾದ ಚುನಾವಣೆ. ಎಷ್ಟೇ ಭಿನ್ನಾಭಿಪ್ರಾಯ, ಅಸಮಾಧಾನ ಇದ್ದರೂ ಅದನ್ನು ಬದಿಗಿರಿಸಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ, ಈ ಬಾರಿ ಎಲ್ಲರೂ ಸೇರಿ ಕಾಂಗ್ರೆಸ್ ಪಕ್ಷವನ್ನ ಸುಳ್ಯದಲ್ಲಿ ಗೆಲ್ಲಿಸಿ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಹಾಗು ಕಾಂಗ್ರೆಸ್ ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ
ಸಭೆಯಲ್ಲಿ ಅವರು ಮಾತನಾಡಿದರು.ಹಿಂದೆ ಬಡವರು ಕೂಡಾ ಬ್ಯಾಂಕ್ ಗೆ ಹೋಗುವಂತೆ ಮಾಡಿದ್ದು ಇಂದಿರಾಗಾಂಧಿ. ಮಂಗಳೂರು-ಉಡುಪಿಯ ಜನತೆ ಬ್ಯಾಂಕ್ ಸ್ಥಾಪನೆ ಮಾಡಿದರು. ಆದ್ರೆ ಇದೀಗ ಕರಾವಳಿಯ ಕೆಲ ಬ್ಯಾಂಕ್ ಗಳನ್ನ ಬೇರೆ ಬ್ಯಾಂಕ್ ಜೊತೆ ವಿಲೀನ ಮಾಡಿದ್ದಾರೆ. ಇದು ಯಾತಕ್ಕಾಗಿ ಅಂತ ಮೋದಿಜಿ ಅವರು ಹೇಳಬೇಕು. ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಯಾವ ಪ್ರಯೋಜನವೂ ಆಗಿಲ್ಲ ಎಂದ ಅವರು ಕಾಂಗ್ರೆಸ್ ಸರ್ಕಾರ ಇರುವಾಗ ಅದೆಷ್ಟೋ ಕಾರ್ಯಕ್ರಮಗಳನ್ನ ಕೊಟ್ಟು ರಸ್ತೆಗಳನ್ಬು, ಸೇತುವೆಗಳನ್ನು, ಬೃಹತ್ ಕೈಗಾರಿಕೆಗಳನ್ನು ಕೊಟ್ಟು ಮಂಗಳೂರು ಮತ್ತು ಉಡುಪಿಯನ್ನು ಅಭಿವೃದ್ಧಿ ಮಾಡಿದ್ದೇವೆ.
ಆದರೆ ಕರಾವಳಿಯಲ್ಲಿ ಬಿಜೆಪಿ ಅಭಿವೃದ್ಧಿಗೆ ಒತ್ತು ನೀಡಿಲ್ಲ ಬದಲಾಗಿ, ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡಿ ರಾಜಕೀಯ ಲಾಭ ಪಡೆಯುವುದು ಬಿಜೆಪಿ ಕೆಲಸ ಎಂದು ಹೇಳಿದರು.
70 ವರ್ಷಗಳಲ್ಲಿ ಕಾಂಗ್ರೆಸ್ ಮಾಡಿದ ಸಾಧನೆ ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದಿದೆ. ರೈತರಿಗೆ 72000 ಕೋಟಿ ಪ್ಯಾಕೇಜ್ ನೀಡಿರುವುದು ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ, ಆಹಾರ ಭದ್ರತೆಯ ಬಿಲ್, ಉದ್ಯೋಗಕ್ಕಾಗಿ ನರೇಗಾ ಜಾರಿ ಮಾಡಿದ್ದು ಕಾಂಗ್ರೆಸ್, ದೊಡ್ಡ ದೊಡ್ಡ ಕಾರ್ಖಾನೆಗಳನ್ನು, ಡ್ಯಾಂಗಳನ್ನು ಸ್ಥಾಪಿಸಿದ್ದು, ಶೈಕ್ಷಣಿಕವಾಗಿ, ಆರ್ಥಿಕವಾಗಿ ದೇಶವನ್ನು ಮುನ್ನಡೆಸಿದ್ದು ಕಾಂಗ್ರೆಸ್ ಸಾಧನೆ. ಮುಂದೆ ಕಾಂಗ್ರೆಸ್ ಸರ್ಕಾರ ಬಂದಲ್ಲಿ ಜಿಲ್ಲೆಯಲ್ಲಿ ಬಡವರಿಗಾಗಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುತ್ತೇವೆ. ಕಾಂಗ್ರೆಸ್ ಈ ಬಾರಿ ನೀಡಿರುವ ಗ್ಯಾರಂಟಿ ಕಾರ್ಡ್ ಪಕ್ಷ ನೀಡುವ ಪಕ್ಕಾ ಗ್ಯಾರಂಟಿ ಎಂದ
ಅವರು 200 ಯೂನಿಟ್ ವಿದ್ಯುತ್ ನೀಡುವ ಗೃಹ ಜ್ಯೋತಿ, ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ನೀಡುವ ಅನ್ನ ಭಾಗ್ಯ ಯೋಜನೆ, ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂ ನೀಡುವ ಗೃಹ ಲಕ್ಷ್ಮಿ ಯೋಜನೆ, ಯುವಕರಿಗೆ ಪಿಂಚಣಿ ನೀಡುವ ಯುವ ನಿಧಿ ಯೋಜನೆ ಅನುಷ್ಠಾನ ಮಾಡಿಯೇ ಮಾಡ್ತೇವೆ. ಯಾರೇ ಮುಖ್ಯಮಂತ್ರಿ ಆದರೂ ಕೊಟ್ಟ ವಚನವನ್ನು ಪಾಲಿಸುತ್ತೇವೆ ಎಂದರು.
ಯುವಕರಿಗೆ ಬಿಜೆಪಿ ಸರ್ಕಾರ ಉದ್ಯೋಗ ಕೊಡುವ ಭರವಸೆ ನೀಡಿತ್ತು, ಆದ್ರೆ ಇಲ್ಲೀವರೆಗೂ ಈಡೇರಿಲ್ಲ, ರಾಜ್ಯದಲ್ಲಿ 2.5 ಲಕ್ಷ ಉದ್ಯೋಗ, ಕೇಂದ್ರದಲ್ಲಿ 30 ಲಕ್ಷ ಉದ್ಯೋಗ ಖಾಲಿ ಇದೆ ಎಂದು ಹೇಳಿದರು.
ಆದ್ರೆ ಕಾಂಗ್ರೆಸ್ ಸರ್ಕಾರ ಯುವಕರಿಗೆ ಉದ್ಯೋಗ ನೀಡುತ್ತೇವೆ ಎಂದರು.
ದೇಶದ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಕಾಂಗ್ರೆಸ್ ಗೆಲ್ಲಿಸಿ ಎಂದು ಖರ್ಗೆ ಕರೆ ನೀಡಿದರು.
ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಕಾಂಗ್ರೆಸ್ ಮುಖಂಡರಾದ ಡಾ.ರಘು, , ಎನ್.ಜಯಪ್ರಕಾಶ್ ರೈ, ಮಹಮ್ಮದ್ ಮಸೂದ್, ಕೋಡಿಜಾಲ್ ಇಬ್ರಾಹಿಂ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಎಂ.ವೆಂಕಪ್ಪ ಗೌಡ, ಎಐಸಿಸಿ ವೀಕ್ಷಕಿ ಶೀಬಾ ರಾಮಚಂದ್ರನ್, ಮಹಾರಾಷ್ಟ್ರದ ಮಾಜಿ ಸಚಿವ ಸುನಿಲ್ ಕೇದಾರ್, ಶಾಲೆಟ್ ಪಿಂಟೋ, ಗೀತಾ ಕೋಲ್ಚಾರ್, ಎಂ.ಎಸ್.ಮಹಮ್ಮದ್, ಲುಕ್ಮಾನ್ ಬಂಟ್ವಾಳ್, ಸವಾದ್ ಸುಳ್ಯ, ಶಾಹುಲ್ ಹಮೀದ್ ಕುತ್ತಮೊಟ್ಟೆ, ಸರಸ್ವತಿ ಕಾಮತ್, ವಹಿದಾ ಇಸ್ಮಾಯಿಲ್, ಕಾವು ಹೇಮನಾಥ ಶೆಟ್ಟಿ, ಕೆ.ಎಂ.ಮುಸ್ತಫ, ಇಸ್ಮಾಯಿಲ್ ಪಡ್ಪಿನಂಗಡಿ.ಎ.ಮಹಮ್ಮದ್ ಎಸ್.ಸಂಶುದ್ದೀನ್, ರಾಜೀವಿ ಆರ್ ರೈ, ಪಿ.ಪಿ.ವರ್ಗೀಸ್, ಶರೀಫ್ ಕಂಠಿ, ಶಾಫಿ ಕುತ್ತಮೊಟ್ಟೆ, ಸಿದ್ದಿಕ್ ಕೊಕ್ಕೊ ಮತ್ತಿತರರು ಉಪಸ್ಥಿತರಿದ್ದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಸ್ವಾಗತಿಸಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭಾರತ್ ಮುಂಡೋಡಿ ಕಾರ್ಯಕ್ರಮ ನಿರೂಪಿಸಿದರು.
ಗ