ವಿಟ್ಲ: ರಾಜ್ಯ,ರಾಷ್ಟ್ರದ ಅಭಿವೃದ್ಧಿಯಲ್ಲಿ ಸ್ವಾವಲಂಬನೆಯ ರಾಷ್ಟ್ರ ನಿರ್ಮಾಣದಲ್ಲಿ ಕಾಂಗ್ರೆಸ್ ಪಾತ್ರ ದೊಡ್ಡದು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ. ಕೆ. ಹರಿಪ್ರಸಾದ್ ಹೇಳಿದರು.
ಅವರು ಬುಧವಾರ ವಿಟ್ಲದಲ್ಲಿ ವಿಟ್ಲ – ಉಪ್ಪಿನಂಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಜನರು ಬದುಕಿನ ಬಗ್ಗೆ ಚಿಂತನೆ ಮಾಡುವ ಪಕ್ಷ
ಕಾಂಗ್ರೆಸ್ ಎಂದು ಹೇಳಿದರು.ವಿಧಾನ ಪರಿಷತ್ತು ಸದಸ್ಯ ಡಾ. ಮಂಜುನಾಥ ಭಂಡಾರಿ ಮಾತನಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರಾಳಿಯಲ್ಲಿ ಐಟಿ ಹಾಗೂ ಗಾರ್ಮೆಂಟ್ ಇಂಡಸ್ಟ್ರಿ ಪಾರ್ಕ್ ಸ್ಥಾಪನೆಯ ಮೂಲಕ 1ಲಕ್ಷ ಉದ್ಯೋಗ ಸೃಷ್ಟಿಸುವ ಯೋಜನೆ ಹಾಕಲಾಗಿದೆ. ಕರಾವಳಿಯ ಅಭಿವೃದ್ಧಿಯ ಮೂಲಕ ಪ್ರವಾಸೋದ್ಯಮದ ಬೆಳವಣಿಗೆಗೆ ಯೋಜನೆ ಹಾಕಲಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ವಹಿಸಿದ್ದರು.ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ. ವಿಶ್ವನಾಥ ರೈ, ಪ್ರಮುಖರಾದ ಕೃಪಾ ಅಮರ್ ಆಳ್ವ, ಸತೀಶ್ ಕೆಡೆಂಜ, ಚಂದ್ರಹಾಸ ಶೆಟ್ಟಿ, ಅಶೋಕ್ ಕುಮಾರ್ ರೈ, ದಿವ್ಯ ಪ್ರಭಾ ಚಿಲ್ತಡ್ಕ, ಪ್ರಹ್ಲಾದ ಬೆಳ್ಳಿಪ್ಪಾಡಿ,ಜೋಕಿಮ್ ಸಿಕ್ವೇರಾ ಉಪಸ್ಥಿತರಿದ್ದರು.
ವಿಟ್ಲ ಉಪ್ಪಿನಂಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ ಕೆ. ಬಿ. ಸ್ವಾಗತಿಸಿದರು. ಪಟ್ಟಣ ಪಂಚಾಯಿತಿ ಸದಸ್ಯ ವಿ.ಕೆ.ಎಂ. ಅಶ್ರಫ್ ವಂದಿಸಿದರು. ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ವಿವಿಧ ಕಡೆಗಳಲ್ಲಿ ಕರಾವಳಿ ಪ್ರಜಾಧ್ವನಿ ಯಾತ್ರೆ ನಡೆಯಿತು.