ಸುಳ್ಯ:ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ವಿವಾದ ಸಂಬಂಧಿಸಿ ಪರಿಶೀಲನೆ ನಡೆಸಲು ಕೆಪಿಸಿಸಿ ವೀಕ್ಷಕರು ಜು.8ರಂದು ಸುಳ್ಯಕ್ಕೆ ಆಗಮಿಸಿ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ತಿಳಿಸಿದ್ದಾರೆ. ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಗಳೂರಿನಲ್ಲಿ ವೀಕ್ಷಕರು
ಸಭೆ ನಡೆಸಿದ್ದರೂ ಸುಳ್ಯದಲ್ಲಿ ಸಭೆ ನಡೆಸಿ ಅಭಿಪ್ರಾಯ ನಡೆಸಬೇಕು ಎಂಬ ನಿಟ್ಟಿಲ್ಲಿ ಮತ್ತೆ ಕೆಪಿಸಿಸಿ ವೀಕ್ಷಕರ ನೇಮಕ ಮಾಡಲಾಗಿದೆ. ವೀಕ್ಷಕರ ತಂಡದಲ್ಲಿ ಕೆಪಿಸಿಸಿ ಉಪಾಧ್ಯಕ್ಷರುಗಳಾದ ವಿ.ಆರ್. ಸುದರ್ಶನ್, ಎಂ. ನಾರಾಯಣ ಸ್ವಾಮಿ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಗೇರು ನಿಗಮದ ಅಧ್ಯಕ್ಷೆ ಮಮತ ಶೆಟ್ಟಿ ಯವರು ಒಳಗೊಂಡಿದ್ದಾರೆ. ಇವರು ಜು.8ರಂದು ಸುಳ್ಯಕ್ಕೆ ಬಂದು ವೀಕ್ಷಕರು ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ.
ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯ ಸಂಗ್ರಹಿಸಿ ವರದಿಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಲಿದ್ದಾರೆ. ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸುಳ್ಯ ನಗರ ಪಂಚಾಯತ್ಗೆ ಅಭಿವೃದ್ಧಿಗೆ 5 ಕೋಟಿ ವಿಶೇಷ ಅನುದಾನ ತರಲು ಪ್ರಯತ್ನ ನಡೆಸಲಾಗುವುದು, ಸಂಪಾಜೆ ಗ್ರಾಮಕ್ಕೆ 3 ಕೋಟಿ ಹಾಗೂ ತೊಡಿಕಾನಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗೆ 2 ಕೋಟಿ ಅನುದಾನ ತರಲು ಪ್ರಯತ್ನ ನಡೆಸಲಾಗುತಿದೆ ಎಂದು ಶಹೀದ್ ಹೇಳಿದರು.