ಸುಳ್ಯ:ಮಹಾತ್ಮ ಗಾಂಧೀ ಉದ್ಯೋಗ ಖಾತರಿ ಯೋಜನೆ ಸೇರಿದಂತೆ ಕಾಂಗ್ರೆಸ್ ಸರಕಾರ ನೀಡಿದ ಜನಪರ ಯೋಜನೆಗಳ ಹೆಸರುಗಳನ್ನು ಬದಲಾವಣೆ ಮಾಡಿ ತಮ್ಮ ಸರಕಾರದ ಸಾಧನೆ ಎಂದು ಬಿಂಬಿಸುವುದೇ ಕೇಂದ್ರದ ಬಿಜೆಪಿ ಸರಕಾರದ ಸಾಧನೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಹೇಳಿದೆ. ಆ ಮೂಲಕ ಕಳೆದ ಆರೇಳು ದಶಕಗಳಿಂದ
ಮಹಾತ್ಮ ಗಾಂಧಿ ಮತ್ತು ಕಾಂಗ್ರೆಸ್ ಮೇಲಿರುವ ದ್ವೇಷವನ್ನು ಬಿಜೆಪಿ ತೀರಿಸಿಕೊಳ್ಳುತ್ತಿದೆ ಎಂದು ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ ಹೇಳಿದ್ದಾರೆ.
ಮೋದಿ ಸರಕಾರ ಯಾವುದೇ ಹೊಸ ಯೋಜನೆಗಳನ್ನು ಮಾಡದೇ ಕೇವಲ ಚಾಲ್ತಿಯಲ್ಲಿರುವ ಯೋಜನೆಗಳನ್ನು ಹೆಸರುಗಳನ್ನು ಬದಲಾವಣೆ ಮಾಡಿ ಜನರ ಮುಂದೆ ತರುತ್ತಿದ್ದಾರೆ ಎಂದು ಹೇಳಿದರು. ನ್ಯಾಷನಲ್ ಹೆರಾಲ್ಡ್ ಸುಳ್ಳು ಕೇಸನ್ನು ನ್ಯಾಯಾಲಯ ರದ್ದು ಪಡಿಸಿರುವುದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ಅವರು ಹೇಳಿದರು.
ಪತ್ರಿಕಾ ಗೋಷ್ಠಿಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ, ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫಾ, ಕಾಂಗ್ರೆಸ್ ಎಸ್. ಸಿ ಘಟಕದ ತಾಲೂಕು ಅಧ್ಯಕ್ಷ ಮಹೇಶ ಬೆಳ್ಳಾಲ್ಕರ್ ಉಪಸ್ಥಿತರಿದ್ದರು.













