ಸುಳ್ಯ:ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಯಾವತ್ತೂ ಬದ್ಧವಾಗಿದೆ. ಪಕ್ಷದ ಕಡೆಯಿಂದ ಸರಕಾರದ ಗಮನಕ್ಕೆ ತಂದು ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಸಲಾಗುವುದು. ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿ, ಇಲಾಖೆಗಳ ಗಮನಕ್ಕೆ ತಂದು ಪರಿಹರಿಸುವ ಪ್ರಯತ್ನವನ್ನು ಶಾಸಕರು ಮೊದಲು ಮಾಡಬೇಕು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದ್ದಾರೆ ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಅವರು ‘ಸುಳ್ಯದಲ್ಲಿ ಓಟು ಪಡೆದುಕೊಂಡ ಬಿಜೆಪಿಯವರಲ್ಲಿಯೂ ಅಭಿವೃದ್ಧಿಯ ಕುರಿತು ಕೇಳಿ’ ಎಂದ ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆಯ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಆಸ್ಪತ್ರೆಯ ಸಿಬ್ಬಂದಿ ಕೊರತೆ, ಪ್ರಸೂತಿ ತಜ್ಞರ ಸಮಸ್ಯೆ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳ ಪರಿಹಾರಕ್ಕೆ, ಕ್ಷೇತ್ರದ ಅಭಿವೃದ್ಧಿಗೆ ಶಾಸಕರು ಮೊದಲು ಆದ್ಯತೆ ನೀಡಬೇಕು. ಇಲ್ಲಿ ಗೆದ್ದ ಜನಪ್ರತಿನಿಧಿಗಳೂ ಅಭಿವೃದ್ಧಿ ಕುರಿತು ಗಮನ ಹರಿಸಲಿ ಎಂಬ ಅರ್ಥದಲ್ಲಿ ಸಚಿವರು ಹೇಳಿದ್ದಾರೆ ಎಂದು ಹೇಳಿದರು. ಅಡಿಕೆ ಹಳದಿ ರೋಗದ ಸಮಸ್ಯೆಯ ಬಗ್ಗೆ ಸಚಿವರ ಗಮನಕ್ಕೆ ತರಲಾಗಿದೆ. ಪರಿಹಾರ ನೀಡುವುದರ ಜೊತೆಗೆ ಹಳದಿ ರೋಗದ ಬಗ್ಗೆ ಸಂಶೋಧನೆ ನಡೆಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸುವುದಾಗಿ ಸಚಿವರು ತಿಳಿಸಿದ್ದಾರೆ ಎಂದು ಅವರು ಹೇಳಿದರು. ಶಾಸಕ ಭರತ್ ಶೆಟ್ಟಿ ಲೋಕೆಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಮಾತನಾಡಿರುವುದು ಖಂಡನೀಯ ಎಂದು ಪಿ.ಸಿ.ಜಯರಾಮ ಹೇಳಿದರು.ತಮ್ಮ ಮೊದಲ ಭಾಷಣದಲ್ಲಿ ಒಂದೂವರೆ ಗಂಟೆಯ ಭಾಷಣದಲ್ಲಿ 15 ವಿಷಯಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಬಿಜೆಪಿಯವರಿಗೆ ಅವರ ಭಾಷಣವನ್ನು ಅರಗಿಸಿಕೊಳ್ಳಲು ಆಗುವುದಿಲ್ಲ ಎಂದರು.
ಬ್ಲಾಕ್ ಕಾಂಗ್ರೆಸ್ ಕೆಪಿಸಿಸಿ ಸಂಯೋಜಕ ಪ್ರದೀಪ್ ಕುಮಾರ್ ರೈ ಪಾಂಬಾರು ಮಾತನಾಡಿ’ ವಿಪಕ್ಷ ನಾಯಕರಾಗಿ ಲೋಕಸಭೆಯ ತಮ್ಮ ಪ್ರಥಮ ಭಾಷಣದಲ್ಲಿ ರಾಹುಲ್ ಗಾಂಧಿ ಅವರು ಅತ್ಯುತ್ತಮವಾಗಿ ಮಾತನಾಡಿದ್ದಾರೆ. ದೇಶದ ಪ್ರತಿಯೊಬ್ಬರೂ ಪ್ರೀತಿಯಿಂದ ಬದುಕಬೇಕು ಎಂಬ ಸಂದೇಶವನ್ನು ನೀಡಿದ್ದಾರೆ. ಅವರ ಮಾತಿನಿಂದ ಹತಾಶರಾಗಿ ಬಿಜೆಪಿಯ ಜನಪ್ರತಿನಿಧಿಗಳು ಈ ರೀತಿ ಮಾತನಾಡುತ್ತಿದ್ದಾರೆ. ರಾಹುಲ್ ಗಾಂಧಿ ಕುರಿತ ಶಾಸಕ ಭರತ್ ಶೆಟ್ಟಿ ಹೇಳಿಕೆ ಖಂಡನೀಯ ಎಂದು ಅವರು ಹೇಳಿದರು.
ಡಿಸಿಸಿ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ ಮಾತನಾಡಿ’ ಭಾರತ ಹೇಗಿರಬೇಕು ಎಂಬುದನ್ನು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ. ಇದು ಅತ್ಯುತ್ತಮ ಭಾಷಣವಾಗಿ ಮೂಡಿ ಬಂದಿದೆ. ರಾಹುಲ್ ಗಾಂಧಿ ಕುರಿತ ಭರತ್ ಶೆಟ್ಟಿ ಹೇಳಿಕೆ ಖಂಡನೀಯ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ
ವಿದ್ಯುತ್ ಸಮಸ್ಯೆ ಕುರಿತು ಪ್ರಸ್ತಾಪಿಸಿ ಲೈನ್ಮ್ಯಾನ್ ಸಮಸ್ಯೆ ತೀವ್ರವಾಗಿದೆ. ಈ ಹಿನ್ನಲೆಯಲ್ಲಿ ಲೈನ್ಮ್ಯಾನ್ಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತಾಲೂಕಿನ ಹೆಚ್ಚು ಮಂದಿ ಅರ್ಜಿ ಸಲ್ಲಿಸಿ ಎಂದು ಹೇಳಿದರು. ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ನೇಮಕಕ್ಕೆ ಪಟ್ಟಿ ನೀಡಲಾಗಿದೆ.ಸದ್ಯದಲ್ಲಿಯೇ ನೇಮಕಾತಿ ಅಗಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಕೆ.ಗೋಕುಲ್ದಾಸ್, ನಂದರಾಜ ಸಂಕೇಶ, ಶಶಿಧರ ಎಂ.ಜೆ, ಸುರೇಶ್ ಎಂ.ಎಚ್.
ಭವಾನಿಶಂಕರ ಕಲ್ಮಡ್ಕ ಉಪಸ್ಥಿತರಿದ್ದರು.