ಸುಳ್ಯ: ಚುನಾವಣಾ ಪ್ರಚಾರಕ್ಕಾಗಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಅವರು ಮಾ.30ರಂದು ಸುಳ್ಯಕ್ಕೆ ಭೇಟಿ ನೀಡಲಿದ್ದಾರೆ. ಅಂದು ಸುಳ್ಯದಲ್ಲಿ ಚುನಾವಣಾ ಕಚೇರಿ ಉದ್ಘಾಟನೆ, ಕಾಂಗ್ರೆಸ್ ಕಾರ್ಯಕರ್ಯರ ಸಭೆ ನಡೆಯಲಿದೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದರು.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದ ವಿವರ ನೀಡಿದರು.ಕಾಂಗ್ರೆಸ್ ಈ ಬಾರಿ ಸಮರ್ಥ ಅಭ್ಯರ್ಥಿಯನ್ನು
ಕಣಕ್ಕೆ ಇಳಿಸಿದೆ ಎಂದ ಅವರು ಮಾ.30ರಂದು ಬೆಳಗ್ಗೆ 8 ಗಂಟೆಗೆ ಸುಳ್ಯಕ್ಕೆ ಬರುವ ಪದ್ಮರಾಜರು ಸುಳ್ಯದ ಚೆನ್ನಕೇಶವ ದೇವಸ್ಥಾನ, ಕಲ್ಕುಡ ದೈವಸ್ಥಾನ, ಮೊಗರ್ಪಣೆ ಮಸೀದಿ, ಸುಳ್ಯ ಸೈಂಟ್ ಬ್ರಿಜಿಡ್ಸ್ ಚರ್ಚ್ ಹಾಗೂ ಕೆ.ವಿ.ಜಿ. ವಿದ್ಯಾಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ. ಪೂ.11 ಗಂಟೆಗೆ ಸುಳ್ಯ ಸೆಂಟರ್ನಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ ಆಗಲಿದೆ. ಬಳಿಕ ಕಾರ್ಯಕರ್ತರ ಸಭೆ ನಡೆಯಲಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಚುನಾವಣಾ ಉಸ್ತುವಾರಿ ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆಗಮಿಸಲಿದ್ದಾರೆ ಎಂದವರು ಹೇಳಿದರು.
ಲೋಕಸಭಾ ಚುನಾವಣಾ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಎನ್.ಜಯಪ್ರಕಾಶ್ ರೈ ಮಾತನಾಡಿ, “ಚುನಾವಣೆಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಬೂತ್ ಮಟ್ಟದ ಸಭೆಗಳು, ಜಿ.ಪಂ. ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯಗಳು ಆರಂಭವಾಗಿದೆ. ಎ.3ರಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನಾಮಪತ್ರ ಸಲ್ಲಿಸಲಿದ್ದಾರೆ ಬಳಿಕ ಪ್ರಚಾರ ಕಾರ್ಯಕ್ಕೆ ವೇಗ ಸಿಗಲಿದೆ ಎಂದು ಹೇಳಿದರು.
ಗ್ಯಾರಂಟಿಯಿಂದ ಕಾಂಗ್ರೆಸ್ಗೆ ಶಕ್ತಿ:
ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ ಮಾತನಾಡಿ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ನೀಡಲಿದೆ. ಸರಕಾರದ 5 ಗ್ಯಾರಂಟಿ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ಖಾತೆಗೆ ಬೀಳುತ್ತಿದೆ. ಆ ಮೂಲಕ ಕಾಂಗ್ರೆಸ್ ಜನರಿಗೆ ಬದುಕು ಕೊಟ್ಟಿದೆ. ಬದುಕು ಕೊಟ್ಟಿರುವ ಕಾಂಗ್ರೆಸ್ ಪಕ್ಷಕ್ಕೆ ಜನ ಮತ ಕೊಡುತ್ತಾರೆ ಎಂಬ ವಿಶ್ವಾಸ ಇದೆ. ಬದುಕು ಕಟ್ಟಬೇಕಾದರೆ ಪ್ರತಿಯೊಬ್ಬರಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬೇಕು. ಆರ್ಥಿಕ ಶಕ್ತಿ ನೀಡಿರುವುದು ಕಾಂಗ್ರೆಸ್. ಇದರ ಆಧಾರದ ಮೇಲೆ ನಾವು ಮತ ಯಾಚಿಸುತ್ತೇವೆ ಎಂದು ಅವರು ಹೇಳಿದರು. ಈ ಬಾರಿ ಖಂಡಿತವಾಗಿ ಜನರು ಕಾಂಗ್ರೆಸ್ ಬೆಂಬಲಿಸುತ್ತಾರೆ. ಸರಕಾರದ ಯೋಜನೆಗೆ ಕೃತಜ್ಞತೆ ಯಾಗಿ ಮತ ನೀಡುತ್ತಾರೆಂಬ ವಿಶ್ವಾಸ ನಮಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ,
ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕೆಪಿಸಿಸಿ ಸದಸ್ಯೆ ಸರಸ್ವತಿ ಕಾಮತ್, ಸುಳ್ಯಬ್ಲಾಕ್ ಉಸ್ತುವಾರಿ ಸರ್ವೋತ್ತಮ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಕೆಪಿಸಿಸಿ ಅಲ್ಪ ಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ಮುಸ್ತಫ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ,ಡಿಸಿಸಿ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು, ಇಂಟೆಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ನ.ಪಂ.ಸದಸ್ಯ ರಾಜು ಪಂಡಿತ್,ಪ್ರಮುಖರಾದ ಎಸ್.ಸಂಶುದ್ದಿನ್, ರಂಜಿತ್ ರೈ ಮೇನಾಲ, ಪ್ರವೀಣ ಮರುವಂಜ, ಸುಜಯ ಕೃಷ್ಣ, ಕುಶಾಲಪ್ಪ ನೆಲ್ಯಾಡಿ, ದೀಕ್ಷಿತ್ ನೆಲ್ಯಾಡಿ, ಜಗದೀಶ್ ಕೆರೆಕ್ಕೋಡಿ ಇದ್ದರು.