ಸುಳ್ಯ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಿರುವುದರಲ್ಲಿ ಜಿಲ್ಲಾಡಳಿತ ಸುಳ್ಯ ತಾಲೂಕನ್ನು ಕಡೆಗಣಿಸಿದೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ 34 ವ್ಯಕ್ತಿಗತ ಮತ್ತು
20 ಸಂಘಟನೆಗಳು ಸೇರಿ 54 ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ಇದರಲ್ಲಿ ಸುಳ್ಯ ತಾಲೂಕಿಗೆ ಕೇವಲ ಒಂದು ಪ್ರಶಸ್ತಿ ಮಾತ್ರ ಬಂದಿದೆ. ಸುಳ್ಯದವರೇ ಸಚಿವರಿದ್ದರೂ ತಾಲೂಕಿನ ಸಾಧಕರನ್ನು ಕಡೆಗಣಿಸಲಾಗಿದೆ ಎಂದು ಅವರು ಹೇಳಿದರು.
ಕೆಪಿಸಿಸಿ ವಕ್ತಾರ ಭರತ್ ಮುಂಡೋಡಿ ಮಾತನಾಡಿ
‘ಸುಳ್ಯ ತಾಲೂಕು ಪಂಚಾಯತ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಸೇರಿದಂತೆ ತಾಲೂಕಿನ ಬಹುತೇಕ ಇಲಾಖೆಗಳಲ್ಲಿ ಅಧಿಕಾರಿಗಳಿಲ್ಲದೆ ಹುದ್ದೆಗಳು ಖಾಲಿ ಬಿದ್ದಿದೆ. ಇದರಿಂದ ತಾಲೂಕಿನಲ್ಲಿ ಅಭಿವೃದ್ಧಿ ಕೆಲಸಗಳಿಗೆ ತೀವ್ರ ಹಿನ್ನಡೆಯಾಗಿದೆ ಎಂದು ಹೇಳಿದರು. ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳ ನೇಮಕ ಮಾಡದಿದ್ದರೆ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ನ.ಪಂ.ಸದಸ್ಯ ಕೆ.ಗೋಕುಲ್‌ದಾಸ್,
ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ.ಜೆ, ಅಬ್ದುಲ್ ಗಫೂರ್ ಕಲ್ಮಡ್ಕ, ಸುರೇಶ್ ಎಂ.ಎಚ್, ಭವಾನಿಶಂಕರ ಕಲ್ಮಡ್ಕ ಉಪಸ್ಥಿತರಿದ್ದರು.