ಸುಳ್ಯ:ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೂನ್ 21 ರಂದು ನಡೆಯಲಿರು ಕೆಪಿಸಿಸಿ ನೂತನ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭಕ್ಕೆ ಸುಳ್ಯದಿಂದ 200 ಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗು ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಕೆಪಿಸಿಸಿ ಅಧ್ಯಕ್ಷರ ಪದಗ್ರಹ ಸಮಾರಂಭ ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ. ಪ್ರತಿ ಬ್ಲಾಕ್ನಿಂದ ವಿವಿಧ ಘಟಕಗಳ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ವತಿಯಿಂದ ಎಸ್ಐಆರ್ ಬಗ್ಗೆ ವಿಶೇಷ ಕಾಳಜಿ ವಹಿಸಿ ಪ್ರತಿ ಕಡೆಗಳಲ್ಲಿ ಸಭೆ ನಡೆಸಲಾಗುತಿದೆ ಎಂದರು. ಇದೀಗ ಯುದ್ಧ ನಿಂತು ಶಾಂತಿ ಒಪ್ಪಂದ ಉಂಟಾಗಿರುವ ಹಿನ್ನಲೆಯಲ್ಲಿ ಭಾರತದಲ್ಲಿ ಏರಿಸಲಾದ ಪೆಟ್ರೋಲ್, ಡೀಸೆಲ್, ಹಾಗು ಗ್ಯಾಸ್ ದರವನ್ನು ಕೂಡಲೇ ಕಡಿಮೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಮಾತನಾಡಿ ‘ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗುತಿದೆ. ಎಸ್ಐಆರ್ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ವಿವಿಧ ಕಡೆಗಳಲ್ಲಿ ಬಿಎಲ್ಎ2 ಸಭೆಗಳನ್ನು ನಡೆಸಿ ತರಬೇತಿ ನೀಡಲಾಗುತಿದೆ ಎಂದರು. ಕೆಪಿಸಿಸಿ ಮಾರ್ಗಸೂಚಿಯಂತೆ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ ಮಾಡಲಾಗಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಇಂಟೆಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಪ್ರಮುಖರಾದ ಶರೀಫ್ ಕಂಠಿ, ಸಿದ್ದಿಕ್ ಕೊಕ್ಕೊ, ಧನುಷ್ ಕುಕ್ಕೆಟ್ಟಿ,ರಕ್ಷಿತ್ ಗೂನಡ್ಕ ಉಪಸ್ಥಿತರಿದ್ದರು.





